ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ಬಗ್ಗೆ ಅಪಾರ ಗೌರವವಿದೆ: ರೋಹಿತ್‌ ಚಕ್ರತೀರ್ಥ

Last Updated 1 ಜೂನ್ 2022, 5:17 IST
ಅಕ್ಷರ ಗಾತ್ರ

ಬೆಂಗಳೂರು: ‘ಕುವೆಂಪು ಅವರ ವ್ಯಕ್ತಿತ್ವಕ್ಕಾಗಲೀ, ಬರಹಕ್ಕಾಗಲೀ ಅವಮಾನ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಕುವೆಂಪು ಬರಹಗಳನ್ನು ಶಾಲಾ ದಿನಗಳಿಂದಲೂ ಓದಿಕೊಂಡು ಬಂದಿದ್ದೇನೆ. ‘ಶ್ರೀರಾಮಾಯಣ ದರ್ಶನಂ’ ಮಹಾಕಾವ್ಯದ ಕೆಲವು ವಿಶಿಷ್ಟ ಪಾತ್ರಗಳ ಬಗ್ಗೆ ಉಪನ್ಯಾಸ ಮಾಡಿದ್ದೇನೆ ಮತ್ತು ಬರೆದಿದ್ದೇನೆ’ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

‘ಬೇಂದ್ರೆ ಮತ್ತು ಕುವೆಂಪು ಕನ್ನಡದ ಗಂಗೆ– ಕಾವೇರಿಯರು ಎಂಬ ಶೀರ್ಷಿಕೆ ಕೊಟ್ಟು ಬರೆದವನು ನಾನು. ಕುವೆಂಪು ಮೇಲೆ ಗೌರವ ಇದ್ದ ಕಾರಣಕ್ಕಾಗಿ ನಮ್ಮ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅವರ ಅತ್ಯುತ್ತಮ ಶಿಶು ಸಾಹಿತ್ಯವಾದ ಬೊಮ್ಮನಹಳ್ಳಿ ಕಿಂದರಿ ಜೋಗಿಯನ್ನು ಪಾಠವಾಗಿ ಅಳವಡಿಸಿದ್ದೆವು’ ಎಂದಿದ್ದಾರೆ.

‘ಈ ಎಲ್ಲ ವಿಚಾರಗಳನ್ನು ಗಮನಿಸದೇ ಏಕಾಏಕಿಯಾಗಿ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಿ, ತೇಜೋವಧೆ ಮಾಡುವ ಕೆಲಸ ನಡೆಯುತ್ತಿರುವುದು ಬೇಸರದ ಸಂಗತಿ. ಕುವೆಂಪು ವಿರೋಧಿ ಎಂಬ ರೀತಿಯಲ್ಲಿ ಬಿಂಬಿಸುತ್ತಿರುವುದು ಗಾಸಿ ಉಂಟು ಮಾಡಿದೆ. ಸಾಮಾಜಿಕ ಜಾಣತಾಣದಲ್ಲಿ ನಾಡಗೀತೆಗೆ ಅವಮಾನ ಮಾಡಿ ಬರೆದ ವ್ಯಕ್ತಿಗೆ ಶಿಕ್ಷೆಯಾಗಲಿ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT