ಮಂಗಳವಾರ, ಮಾರ್ಚ್ 21, 2023
30 °C

ಕೇಳಿದ ಪ್ರಶ್ನೆಯನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು: ಇ.ಡಿ ದಾಳಿ ಬಗ್ಗೆ ಬೇಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಸಚಿವ ರೋಷನ್‌ ಬೇಗ್‌ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.

ದೀರ್ಘ ಕಾಲದವರೆಗೆ ಹುಡುಕಾಟ, ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಬೆಳಗಿನ ಜಾವ ವಾಪಸ್ ಹೋಗಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್‌, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) ನಡೆದಿದೆಯೇ ಎಂಬುದರ ಬಗ್ಗೆ ಇ.ಡಿ ಅಧಿಕಾರಿಗಳು ಶೋಧ ನಡೆಸಿದರು. ಎರಡು–ಮೂರು ಗಂಟೆಗಳಲ್ಲೇ ನಡೆಯಬೇಕಿದ್ದ ಶೋಧವನ್ನು ಅನಗತ್ಯವಾಗಿ ವಿಳಂಬ ಮಾಡಿದರು. ಕೇಳಿದ ಪ್ರಶ್ನೆಗಳನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು. 2004ರಿಂದ ಚುನಾವಣಾ ಆಯೋಗಕ್ಕೆ, ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಕೆ ಮಾಡಿದ್ದೇವೆ. ಆ ಎಲ್ಲಾ ದಾಖಲೆಗಳನ್ನು ಅವರಿಗೆ ಹಾಜರುಪಡಿಸಿದ್ದೇವೆ. ಯಾವುದೇ ತಪ್ಪಿಲ್ಲ ಎಂಬುದು ಅವರಿಗೆ ಮನವರಿಕೆ ಆಗಿದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು