ಗುರುವಾರ , ಡಿಸೆಂಬರ್ 3, 2020
23 °C

ಆರ್.ಆರ್‌. ನಗರ ಉಪಚುನಾವಣೆ: ಹ್ಯಾಟ್ರಿಕ್‌ ಗೆಲುವಿನತ್ತ ಮುನಿರತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಟ್ಟು 25 ಸುತ್ತುಗಳಲ್ಲಿ ನಡೆಯಲಿರುವ ಆರ್‌.ಆರ್‌. ನಗರ ಕ್ಷೇತ್ರದ ಮತಗಳ ಎಣಿಕೆ ಪ್ರಗತಿಯಲ್ಲಿದ್ದು, 15ನೇ ಸುತ್ತಿನ ‌ಅಂತ್ಯಕ್ಕೆ ಬಿಜೆಪಿಯ ಮುನಿರತ್ನ ಅವರು 35,526 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಆ ಮೂಲಕ, ಅವರು ಹ್ಯಾಟ್ರಿಕ್‌ ಗೆಲುವಿನ ಕಡೆಗೆ ಮುನ್ನುಗ್ಗಿದ್ದಾರೆ.

ಕಾಂಗ್ರೆಸ್‌ನ ಕುಸುಮಾ ಅವರಿಗೆ 43,116 ಮತಗಳು ಬಂದರೆ, ಜೆಡಿಎಸ್‌ನ ಕೃಷ್ಣಮೂರ್ತಿ ಕೇವಲ 5638 ಮತಗಳನ್ನು ಮಾತ್ರ ಗಳಿಸಿದ್ದಾರೆ.

ಈವರೆಗೆ ಎಲ್ಲ ಸುತ್ತುಗಳಲ್ಲೂ ಮುನಿರತ್ನ ಅವರು ಮುನ್ನಡೆ ಸಾಧಿಸುತ್ತಲೇ. ಯಾವ ಸುತ್ತಿನಲ್ಲೂ ಕುಸುಮಾ ಪೈಪೋಟಿ ನೀಡಿಲ್ಲ. ಇನ್ನು ಕೇವಲ 10 ಸುತ್ತುಗಳ ಎಣಿಕೆ ಮಾತ್ರ ಬಾಕಿ ಉಳಿದಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮಟ್ಟಿದೆ. ಮುನಿರತ್ನ ಪರ ಘೋಷಣೆ ಕೂಗುತ್ತಿದ್ದಾರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು