ಬುಧವಾರ, ಅಕ್ಟೋಬರ್ 21, 2020
26 °C

ಮುನಿರತ್ನಗೆ ಟಿಕೆಟ್‌ ಕೈ ತಪ್ಪದು: ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯದ ಎರಡು ಕ್ಷೇತ್ರಗಳ ಟಿಕೆಟ್‌ ಪ್ರಕಟವಾಗುವುದು ತಡವಾಗಿದೆ. ಯಾವುದೇ ಕಾರಣಕ್ಕೂ ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್‌ ತಪ್ಪುವುದಿಲ್ಲ. ಬಿಜೆಪಿ ಸೇರಿದ ನನ್ನನ್ನೂ ಸೇರಿದಂತೆ ಎಲ್ಲರಿಗೂ ಟಿಕೆಟ್‌ ನೀಡಿರುವಾಗ, ಒಬ್ಬರಿಗೆ ಟಿಕೆಟ್‌ ಕೈ ತಪ್ಪುವುದು ಹೇಗೆ’ ಎಂದು ಸೋಮಶೇಖರ್‌ ಪ್ರಶ್ನಿಸಿದರು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಎಲ್ಲವನ್ನು ಅಳೆದುತೂಗಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಏನೇ ಆದರೂ ಮುನಿರತ್ನ ಅವರು ಅಭ್ಯರ್ಥಿ ಆಗುವುದು ಖಚಿತ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರೂ ಸೋಮಶೇಖರ್ ಅವರ ಅಭಿಪ್ರಾಯ ಸಮರ್ಥಿಸಿಕೊಂಡರು.

ಸಿ.ಎಂ. ಭೇಟಿಯಾದ ಜಾರಕಿಹೊಳಿ

ಬಿಜೆಪಿ ಟಿಕೆಟ್ ಘೋಷಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಭೆ ನಡೆಸಿದ ಸಚಿವರಾದ ರಮೇಶ ಜಾರಕಿಹೊಳಿ, ಸೋಮಶೇಖರ್‌, ಡಾ. ಸುಧಾಕರ್‌ ಈ ಬಗ್ಗೆ ಚರ್ಚೆ ನಡೆಸಿದರು. 

ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಜಾರಕಿಹೊಳಿ, ‘ಮುನಿರತ್ನ ಅವರಿಗೆ ಟಿಕೆಟ್‌ ಕೊಡಿಸುವುದಲ್ಲದೇ, ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

‘ಬಿಜೆಪಿ ಸರ್ಕಾರ ರಚನೆ ಆಗಲು ಕಾರಣಕರ್ತರಾದವರಲ್ಲಿ ಮುನಿರತ್ನ ಅವರೂ ಒಬ್ಬರು. ನಗರದಲ್ಲಿ ಬಿಜೆಪಿಯನ್ನು ಬಲಪಡಿಸಲು ಇವರು ನೆರವಾಗುತ್ತಾರೆ’ ಎಂದು ಜಾರಕಿಹೊಳಿ ಅವರು, ಮುಖ್ಯಮಂತ್ರಿ ಬಳಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷ ಅಧಿಕಾರಕ್ಕೆ ಬರಲು ಸಹಕರಿಸಿದ ಮುನಿರತ್ನ ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ. ಒಗ್ಗಟ್ಟಿನಿಂದ ಚುನಾವಣೆಯನ್ನು ಗೆಲ್ಲೋಣ ಎಂದಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು