ಬುಧವಾರ, ಸೆಪ್ಟೆಂಬರ್ 28, 2022
26 °C

ವಿಮಾನದಲ್ಲಿ ಕಳ್ಳಸಾಗಣೆ: ₹17.43 ಲಕ್ಷ ಮೌಲ್ಯದ ಚಿನ್ನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ವಿಮಾನದಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಯಾಣಿಕನನ್ನು ಬುಧವಾರ ವಶಕ್ಕೆ ಪಡೆದಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ ₹ 17.43 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈಯಿಂದ ಸ್ಪೈಸ್‌ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಬಂದಿದ್ದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಆತ ಚಪ್ಪಲಿಯೊಳಗೆ ಚಿನ್ನದ ಗಟ್ಟಿಯನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದುದು ಗೊತ್ತಾಗಿದೆ. ತೆರಿಗೆ ವಂಚಿಸಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು