₹ 23,131 ಕೋಟಿ ಅಬಕಾರಿ ತೆರಿಗೆ ಸಂಗ್ರಹ

ಬೆಂಗಳೂರು: ಕೋವಿಡ್ ಪಿಡುಗಿನ ಮಧ್ಯೆಯೂ 2020–21ನೇ ಸಾಲಿನಲ್ಲಿ ₹ 23,131 ಕೋಟಿ ಅಬಕಾರಿ ತೆರಿಗೆ ಸಂಗ್ರಹಣೆ ಆಗಿದೆ ಎಂದು ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ತಿಳಿಸಿದ್ದಾರೆ.
ಆಯವ್ಯಯದಲ್ಲಿ ₹ 22,700 ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಆದರೆ, ಗುರಿಯನ್ನು ಮೀರಿ ಅಂದರೆ ಶೇ 101.90 ರಷ್ಟು ತೆರಿಗೆ ಸಂಗ್ರಹಿಸಲಾಗಿದೆ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೆಚ್ಚಗೆ ವ್ಯಕ್ತಪಡಿಸಿ ಅವರು ಪತ್ರ ಬರೆದಿದ್ದಾರೆ.
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.