ಬೆಂಗಳೂರು: ಆರ್‌ಎಸ್‌ಎಸ್ಸಂಘಟನೆಯು ದೇಶಕ್ಕೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಆರ್‌ಎಸ್‌ಎಸ್ಈ ದೇಶಕ್ಕೆ ದ್ರೋಹ ಬಗೆದ ಸಂಘಟನೆ ಎಂಬುದಕ್ಕೆ ಒಂದಷ್ಟು ನಿದರ್ಶನಗಳಿವೆ. 1929 ರ ಲಾಹೋರ್ ಅಧಿವೇಶನದಲ್ಲಿ ಅಂದಿನ ಅಧ್ಯಕ್ಷರಾದ ಜವಾಹರಲಾಲ್ ನೆಹರೂರವರು ದೇಶದ ಎಲ್ಲಾ ಸಂಸ್ಥೆಗಳ ಮೇಲೆ 1930 ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಬೇಕೆಂದು ಕರೆಕೊಟ್ಟಿದ್ದರು. ಇದನ್ನು ನಿರಾಕರಿಸಿದ ಆರ್‌ಎಸ್‌ಎಸ್ತನ್ನ ಸಂಘದ ಕಛೇರಿಯ ಮೇಲೆ ಭಗವಾಧ್ವಜ ಹಾರಿಸಿತ್ತು’ ಎಂದು ತಿಳಿಸಿದೆ.

‘ಅಷ್ಟೇ ಅಲ್ಲದೆ, ತ್ರಿವರ್ಣ ಧ್ವಜವನ್ನು ಅವಮಾನಿಸುತ್ತಾ 3 ಬಣ್ಣಗಳುಳ್ಳ ಧ್ವಜ ಅನಿಷ್ಟದ ಸಂಕೇತ ಎಂದು ಆರ್‌ಎಸ್‌ಎಸ್ತನ್ನ ಮುಖವಾಣಿ ಆರ್ಗನೈಸರ್ ಅಲ್ಲಿ ಬರೆಕೊಂಡಿತ್ತು. 55 ವರ್ಷಗಳ ಕಾಲ ರಾಷ್ಟ್ರಧ್ವಜಕ್ಕೆ ಗೌರವ ನೀಡದೆ ತನ್ನ ಸಂಘದ ಕಛೇರಿಯ ಮೇಲೆ ತ್ರಿವರ್ಣ ಧ್ವಜದ ಬದಲಾಗಿ ಭಗವಾಧ್ವಜ ಹಾರಿಸಿತ್ತು’ ಎಂದು ಕಾಂಗ್ರೆಸ್ ಆರೋಪಿಸಿದೆ.

‘ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದಂಥಹ ಈ ದೇಶದ ಮೊದಲ ಭಯೋತ್ಪಾದಕ ಗೋಡ್ಸೆ ತಯಾರಾಗಿದ್ದು ಸಹ ಇದೇ ಆರ್‌ಎಸ್‌ಎಸ್ಗರಡಿಯಲ್ಲೇ. ಈ ಬಗ್ಗೆ ನಾಥೂರಾಮ ಗೋಡ್ಸೆಯ ಸಹೋದರ ಗೋಪಾಲ ಗೋಡ್ಸೆ ಜನವರಿ 28 1994ರಲ್ಲಿ ಫ್ರಂಟ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಖಚಿತಪಡಿಸಿದ್ದಾನೆ’ ಎಂದು ಕೆಪಿಸಿಸಿ ಟೀಕಿಸಿದೆ.

‘ನಾವು ಮೂರು ಜನ ಸಹೋದರರು ಅಂದರೆ ನಾಥೂರಾಮ, ನಾನು, ದತ್ತಾತ್ರೇಯ. ನಾವು ಮನೆಯಲ್ಲಿ ಬೆಳೆದೆವು ಎಂಬುದಕ್ಕಿಂತ ಆರ್‌ಎಸ್‌ಎಸ್ಸಂಘಟನೆಯಲ್ಲೇ ಬೆಳೆದವು ಎಂದು ಹೇಳಬಹುದು. ಇದು ಗೋಪಾಲ ಗೋಡ್ಸೆಯ ಮಾತುಗಳು’ ಎಂದು ಟ್ವೀಟಿಸಿದೆ.

‘ಈ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಿಟ್ಟ ಬಾಪೂಜೀ ಮಹಾತ್ಮ ಗಾಂಧಿಯವರು ಸತ್ತ ದಿನ ಸಿಹಿ ಹಂಚಿದ ಗುಳ್ಳೆನರಿ ಆರ್‌ಎಸ್‌ಎಸ್ಹೇಗೆ ತಾನೇ ದೇಶಪ್ರೇಮಿ ಸಂಘಟನೆಯಾಗಬಲ್ಲದು? ಆರ್‌ಎಸ್‌ಎಸ್ಮುಖವಾಣಿ ಆರ್ಗನೈಸರ್ 1970 ಜನವರಿ 11 ರಂದು ತನ್ನ ಸಂಪಾದಕೀಯದಲ್ಲಿ ಗಾಂಧಿಯವರ ಬಗ್ಗೆ ವಿಷಪೂರಿತ ಲೇಖನ ಪ್ರಕಟಿಸಿರಲಿಲ್ಲವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಹೆಜ್ಜೆ ಹೆಜ್ಜೆಗೂ ಈ ದೇಶದ ಸ್ವಾತಂತ್ರ್ಯ ಹೋರಾಟವನ್ನು ಹೀಗಳೆಯುತ್ತಾ ಬ್ರಿಟೀಷರ ಸೈನ್ಯ ಸೇರಲು ಆರ್‌ಎಸ್‌ಎಸ್ತುದಿಗಾಲಲ್ಲಿ ನಿಂತಿರಲಿಲ್ಲವೇ? ಈ ದೇಶದ ಸ್ವಾತಂತ್ರ್ಯಕ್ಕೆ ನಯಾಪೈಸೆ ಕೊಡುಗೆ ಕೊಡದ, ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟೀಷರಿಗೆ ಹಿಡಿದುಕೊಡುತ್ತಿದ್ದ ಆರ್‌ಎಸ್‌ಎಸ್ಸಂಘಟನೆ ದೇಶದ್ರೋಹಿ ಸಂಘಟನೆಯಲ್ಲದೆ ಮತ್ತಿನೇನು?’ ಎಂದು ಕಾಂಗ್ರೆಸ್ ಕೇಳಿದೆ.

‘ಈ ದೇಶದ ರಾಷ್ಟ್ರಧ್ವಜಕ್ಕೆ ಬೆಲೆಕೊಡದೆ ಅವಮಾನಿಸುವ, ಈ ದೇಶ ಕಂಡ ಮಹಾ ದಾರ್ಶನಿಕ ಗಾಂಧಿ ಹತ್ಯೆಯನ್ನು ಸಂಭ್ರಮಿಸುವ ಆರ್‌ಎಸ್‌ಎಸ್ಈ ದೇಶದ ಸಪುಂಸಕ ಸಂಘಟನೆಯೇ ಹೊರತಾಗಿ ಯಾವುದೇ ಕಾರಣಕ್ಕೂ ದೇಶಪ್ರೇಮಿ ಸಂಘಟನೆಯಾಗಲಾರದು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.