ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘ ಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ: ಎಂ.ಪಿ. ರೇಣುಕಾಚಾರ್ಯ

Last Updated 8 ಅಕ್ಟೋಬರ್ 2021, 16:02 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವತ್ತೂ ಅಧಿಕಾರಕ್ಕಾಗಿ ಹೋರಾಡಿಲ್ಲ. ಸಮಾಜ ಸೇವೆಗೆ ಸಮರ್ಪಣೆ ಮಾಡಿಕೊಂಡಿರುವ ಆರ್‌ಎಸ್‌ಎಸ್‌ಗೆ ಕುರ್ಚಿ ವ್ಯಾಮೋಹವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಆರ್‌ಎಸ್‌ಎಸ್‌ ಕುರಿತು ವಿರೋಧ ಪಕ್ಷಗಳ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಆರ್‌ಎಸ್‌ಎಸ್‌ ಕುರಿತು ಮಾತನಾಡುವ ನೈತಿಕತೆ ಇಲ್ಲ. ಕುರ್ಚಿ ವ್ಯಾಮೋಹ ಇರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರಿಗೆ. ಸಂಘ ಪರಿವಾರದವರಿಗೆ ಅಲ್ಲ’ ಎಂದರು.

ಸಿದ್ದರಾಮಯ್ಯ ಮತ ಬ್ಯಾಂಕ್‌ ಸೃಷ್ಟಿಸಿಕೊಳ್ಳಲು ಟಿಪ್ಪು ಜಯಂತಿ ಮಾಡಿದ್ದರು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಮತಕ್ಕಾಗಿ ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ತಾಲಿಬಾನ್‌ ಸಂಸ್ಕೃತಿ ಅವರದ್ದು, ಸಂಘ ಪರಿವಾರದ್ದಲ್ಲ ಎಂದು ಹೇಳಿದರು.

ಪ್ರತಿಭಾವಂತರು ಯಾವುದೇ ಕಡೆ ಇರಬಹುದು. ಅದೇ ರೀತಿ ಆರ್‌ಎಸ್‌ಎಸ್‌ನಲ್ಲೂ ಇದ್ದಾರೆ. ಪ್ರತಿಭಾವಂತರು ಉನ್ನತ ಹುದ್ದೆಗಳಿಗೇರುವುದು ತಪ್ಪಲ್ಲ ಎಂದರು.

ಬಿಎಸ್‌ವೈಗೆ ಸಂಬಂಧವಿಲ್ಲ: ‘ಬಿ.ಎಸ್‌. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ ಎಂಬುದು ಸತ್ಯಕ್ಕೆ ದೂರ. ದಾಳಿ ನಡೆದಿರುವುದು ಉಮೇಶ್‌ ಮೇಲೆ. ಅದಕ್ಕೂ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT