ಭಾನುವಾರ, ಅಕ್ಟೋಬರ್ 2, 2022
19 °C

ಆರ್‌ಎಸ್‌ಎಸ್‌ ಮುಖಂಡನ ಆರೋಗ್ಯ ವಿಚಾರಿಸಿದ ಸಚಿವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು: ಹಲ್ಲೆಗೆ ಒಳಗಾಗಿದ್ದ ಆರ್‌ಎಸ್‌ಎಸ್‌ನ ಜಿಲ್ಲಾ ಸಹ ಶಾರೀರಿಕ್‌ ಪ್ರಮುಖ್‌ ರವಿಕುಮಾರ್ ಅವರ ಆರೋಗ್ಯ ವಿಚಾರಿಸಲು ಭಾನುವಾರ ಆಸ್ಪತ್ರೆಗೆ ಬಂದಿದ್ದ ಸಚಿವರ ಬಳಿ, ಗಾಯಾಳುವಿನ ತಂದೆ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ‘ರಕ್ಷಣೆ ನೀಡಿ’ ಎಂದು ಆಗ್ರಹಿಸಿದರು.

‘ಸಚಿವರು ಕಾಟಾಚಾರಕ್ಕೆ ಬಂದರು. ರಕ್ಷಣೆಯ ಭರವಸೆ ನೀಡಿಲ್ಲ. ನಮಗೆ ರಕ್ಷಣೆ ಇಲ್ಲದಂತಾಗಿದೆ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಭೈರತಿ), ಸಂಸದ ಎಸ್‌. ಮುನಿಸ್ವಾಮಿ ಹಾಗೂ ಮಾಜಿ ಶಾಸಕ ಕೆ.ಎಸ್‌.ಮಂಜುನಾಥ್‌ ಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುವಿಗೆ ಧೈರ್ಯ ತುಂಬಿ, ಘಟನೆ ವಿವರ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು