ಬುಧವಾರ, ಸೆಪ್ಟೆಂಬರ್ 29, 2021
20 °C

ಬೆಂಗಳೂರು: ಈಶ್ವರಪ್ಪ ಅವರನ್ನು ಭೇಟಿಯಾದ ಕಲ್ಲಡ್ಕ ಪ್ರಭಾಕರ ಭಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ‌ ಸಂಘದ (ಆರ್‌ಎಸ್‌ಎಸ್) ಹಿರಿಯ ಮುಖಂಡ ಡಾ. ಕಲ್ಕಡ್ಕ ಪ್ರಭಾಕರ ಭಟ್ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಶನಿವಾರ ಬೆಳಿಗ್ಗೆ ಭೇಟಿಮಾಡಿ, ಮಾತುಕತೆ ನಡೆಸಿದ್ದಾರೆ.

ಈಶ್ವರಪ್ಪ ಅವರ ನಿವಾಸಕ್ಕೆ ಬಂದ ಪ್ರಭಾಕರ ಭಟ್, ಮಾಜಿ ಸಚಿವರೊಂದಿಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಗಳು, ಪಕ್ಷ ಸಂಘಟನೆ, ಸಂಪುಟ ರಚನೆ ಸೇರಿದಂತೆ ಹಲವು ವಿಷಯಗಳ ಕುರಿತು ಇಬ್ಬರೂ ಚರ್ಚಿಸಿದ್ದಾರೆ.

ಬಿಜೆಪಿಯ ಕೆಲವು ಶಾಸಕರು‌ ಮತ್ತು ಮುಖಂಡರು, ಪಕ್ಷ ಹಾಗೂ ಸಂಘ ಪರಿವಾರದ ಸಂಘಟನೆಗಿಂತಲೂ ವೈಯಕ್ತಿಕ ಹಿತಾಸಕ್ತಿಗಳ ಕಡೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂದು ಈಶ್ವರಪ್ಪ ಅವರು ಪ್ರಭಾಕರ ಭಟ್ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಾತಿನಿಧ್ಯ ದೊರೆಯುತ್ತಿರುವ ಕುರಿತು ಬೇಸರ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು