ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೆಸ್ಸೆಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭೆ ಮಾ.19ರಿಂದ

Last Updated 14 ಮಾರ್ಚ್ 2021, 22:45 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ನೀತಿ ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ವಾರ್ಷಿಕ ಅಧಿವೇಶನ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಮಾಗಡಿ ಮುಖ್ಯ ರಸ್ತೆಯ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿಇದೇ 19 ಮತ್ತು 20ರಂದು ನಡೆಯಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎಂಟನೇ ಪ್ರತಿನಿಧಿ ಸಭೆಯಿದು.

ಆರೆಸ್ಸೆಸ್‌ನ ಸರಸಂಘಚಾಲಕರಾದ ಮೋಹನ್ ಭಾಗವತ್‌ ಮತ್ತು ಸರಕಾರ್ಯವಾಹರಾದ ಸುರೇಶ್‌ (ಭಯ್ಯಾಜೀ) ಜೋಷಿಯವರು ಈ ಸಭೆಯ ಕಲಾಪಗಳನ್ನು ನಡೆಸಲಿದ್ದಾರೆ. ಅಧಿವೇಶನದಲ್ಲಿ ಆರೆಸ್ಸೆಸ್‌ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ 35ಕ್ಕೂ ಹೆಚ್ಚು ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

‘ಆರೆಸ್ಸೆಸ್‌ ಹಾಗೂ ವಿವಿಧ ಸಂಘಟನೆಗಳ ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಕಾರ್ಯಕ್ರಮಗಳು, ಮುಂಬರುವ ವರ್ಷದ ಯೋಜನೆ ಇತ್ಯಾದಿ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿದೆ. ರಾಷ್ಟ್ರೀಯ ಮಹತ್ವದ ಕೆಲವು ವಿಷಯಗಳ ಕುರಿತು ಕೂಡಾ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗುತ್ತದೆ’ ಎಂದು ಆರೆಸ್ಸೆಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT