ಬುಧವಾರ, ಜೂನ್ 29, 2022
25 °C
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಕುರಿತು ವಿಸ್ತ್ರತ ಚರ್ಚೆಗಳು

ಅ.28ರಿಂದ30ರವರೆಗೆ ಧಾರವಾಡದಲ್ಲಿ ಆರ್‌ಎಸ್ಎಸ್‌ ಕಾರ್ಯಕಾರಿ ಬೈಠಕ್‌: ಭಾಗವತ್ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಇದೇ 28 ರಿಂದ 30ರವರೆಗೆ ನಡೆಯಲಿದೆ’ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ, ದೇಶ ಹಾಗೂ ನಮ್ಮ ಸ್ವಾಭಿಮಾನದ ಕುರಿತು ತೆಗೆದುಕೊಳ್ಳಬೇಕಾದ ನಿಲುವುಗಳ ಬಗೆಗೆ ಚರ್ಚೆಗಳು ನಡೆಯಲಿವೆ’ ಎಂದರು.

‘ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹಾಗೂ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ.  2025ಕ್ಕೆ ಆರ್‌ಎಸ್‌ಎಸ್ ಶತಮಾನೋತ್ಸವವಿದೆ. 2021 ರಿಂದ 2024ರ ಅವಧಿಯಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಗುವುದು’ ಎಂದರು.

‘ಈ ಬಾರಿ ಪೂರ್ಣ ಪ್ರಮಾಣದ ಬೈಠಕ್ ನಡೆಯಲಿದ್ದು, ಆರ್‌ಎಸ್‌ಎಸ್‌ ಮುಖ್ಯಸ್ಥ, ಸರಸಂಘಚಾಲಕ ಮೋಹನ ಭಾಗವತ್, ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ, ಅಖಿಲ ಭಾರತೀಯ ಕ್ಷೇತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಸೇರಿ ದೇಶದ ಸುಮಾರು 350 ಪ್ರತಿನಿಧಿಗಳು ಭಾಗವಹಿಸುವರು’ ಎಂದರು.

‘ಕೊರೊನಾ ಸಮಯದಲ್ಲಿ ‘ಸೇವಾ ಭಾರತಿ’ಯ ಅನೇಕ ಕಾರ್ಯಕರ್ತರು ಸೇವೆ ಸಲ್ಲಿಸಿದ್ದಾರೆ. 3ನೇ ಅಲೆ ಎದುರಿಸಲು 1.50 ಲಕ್ಷ ಸ್ಥಳಗಳಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ’ ಎಂದು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು