ಬುಧವಾರ, ಮಾರ್ಚ್ 29, 2023
23 °C

ಶಿವಮೊಗ್ಗಕ್ಕೆ ಇಂದು ಮೋಹನ್ ಭಾಗವತ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಇಲ್ಲಿನ ಪೇಸ್ ಕಾಲೇಜಿನ‌ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ದಕ್ಷಿಣ ಪ್ರಾಂತ್ಯದ ಆರ್‌ಎಸ್‌ಎಸ್‌ ಸಂಚಾಲಕರ ಸಭೆ ನಡೆಯಲಿದೆ. ಸಭೆಯಲ್ಲಿ ಸಂಘಟನೆಯ ರಾಷ್ಟ್ರೀಯ ಸರಸಂಚಾಲಕ ಮೋಹನ್ ಭಾಗವತ್ ಪಾಲ್ಗೊಳ್ಳಲಿದ್ದಾರೆ.

ಬಳಿಕ ಅವರು ಇಲ್ಲಿನ ಓ.ಟಿ ರಸ್ತೆಯಲ್ಲಿರುವ ದಿವಂಗತ ದಿನೇಶ್ ಪೈ ಮನೆಗೆ ಭೇಟಿ ನೀಡಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ದಿನೇಶ್ ಪೈ ಆರ್‌ಎಸ್‌ಎಸ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದರು. ಮೋಹನ್ ಭಾಗವತ್ ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭೆಗೆ ಚುನಾವಣೆ ಹತ್ತಿರ ಇರುವುದರಿಂದ ಮೋಹನ್ ಭಾಗವತ್ ಅವರ ಶಿವಮೊಗ್ಗ ಭೇಟಿ ಮಹತ್ವ ಪಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು