ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ ಕಾರ್ಯಕರ್ತ ಕೊಲೆ ಪ್ರಕರಣ: ತ್ವರಿತ ವಿವೇವಾರಿ: ಹೈಕೋರ್ಟ್‌ಗೆ ಸೂಚನೆ

Last Updated 2 ಆಗಸ್ಟ್ 2022, 21:00 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿನಆರ್‌ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದ ಅಪರಾಧಿಯಾಗಿರುವ ಸಿ. ಗೋವಿಂದರಾಜು (ಬಿಬಿಎಂಪಿ ಮಾಜಿ ಸದಸ್ಯೆ ಗೌರಮ್ಮ ಪತಿ) ಅವರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಅಬ್ದುಲ್‌ ಎಸ್‌.ನಜೀರ್‌ ಹಾಗೂ ಜೆ.ಕೆ. ಮಹೇಶ್ವರಿ ಅವರನ್ನು ಒಳಗೊಂಡ ಪೀಠವು, ಸಹ ಅಪರಾಧಿಗೌರಮ್ಮ ಅವರಿಗೆ 2021ರ ಡಿಸೆಂಬರ್‌ನಲ್ಲಿ ಜಾಮೀನು ನೀಡಿರುವುದನ್ನು ಗಮನಿಸಿ ಗೋವಿಂದರಾಜು ಅವರನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತು.

ಅರ್ಜಿದಾರರ ಪರ ವಕೀಲರಾದ ಸಿದ್ಧಾರ್ಥ ಲೂತ್ರಾ ಹಾಗೂ ಸಂಜಯ್‌ ಎಂ. ನುಲಿ ಅವರ ವಾದವನ್ನು ಆಲಿಸಿದ ನ್ಯಾಯಪೀಠವು, ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿತು ಹಾಗೂ ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತು.

ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಗೋವಿಂದರಾಜು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್‌ 2021ರ ಡಿಸೆಂಬರ್ 13ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಗೋವಿಂದರಾಜು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

2012ರ ಡಿಸೆಂಬರ್ ತಿಂಗಳಿ ನಲ್ಲಿ ಚಾಮರಾಜಪೇಟೆಯ ಬಿಎಂಕೆ ಬಡಾವಣೆಯಲ್ಲಿ ಆರ್‌ಟಿಐ ಕಾರ್ಯಕರ್ತ ಲಿಂಗರಾಜುಹತ್ಯೆಯಾಗಿತ್ತು.ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, ತನಿಖೆಗೆ ವಿಶೇಷ ತನಿಖಾ ದಳ (ಎಸ್‍ಐಟಿ) ನೇಮಿಸಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು. ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಅಬ್ದುಲ್ ಅಹದ್ ನೇತೃತ್ವದ ಎಸ್‍ಐಟಿ ತಂಡ ಪ್ರಕರಣದ ತನಿಖೆ ನಡೆಸಿ, 12 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪ ಪಟ್ಟಿ ಸಲ್ಲಿಸಿತ್ತು.

ಕಾರ್ಪೊರೇಟರ್ಆಗಿದ್ದ ವೇಳೆ ಗೌರಮ್ಮ ಹಾಗೂ ಪತಿಯ ಅಕ್ರಮ ಯೋಜನೆಗಳನ್ನುಲಿಂಗರಾಜುಪ್ರಶ್ನಿಸಿದ್ದರು. ಇದೇ ವಿಚಾರಕ್ಕೆಲಿಂಗರಾಜುಮೇಲೆ ಗೌರಮ್ಮಗೆ ದ್ವೇಷ ಇತ್ತು. ಈ ಕಾರಣಕ್ಕೆ ಪತಿ ಗೋವಿಂದರಾಜು ಹಾಗೂ ಈಕೆ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದರು ಎಂದು ತನಿಖೆಯಲ್ಲಿ ದೃಢಪಟ್ಟಿತ್ತು.

ಈ ಕುರಿತ ಸಾಕ್ಷ್ಯಾಧಾರಗಳನ್ನು ಆಧರಿಸಿ 12 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ, 59ನೇ ಸಿಸಿಎಚ್ ನ್ಯಾಯಾಲಯ ತೀರ್ಪು ನೀಡಿತ್ತು.

₹ 3.35 ಕೋಟಿ ಮೌಲ್ಯದ ಆಸ್ತಿ ಇ.ಡಿ ವಶಕ್ಕೆ

ಬೆಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ಕುಟುಂಬದ ₹ 3.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಗೌರಮ್ಮ ಮತ್ತು ಅವರ ಪತಿ ಸಿ. ಗೋವಿಂದರಾಜು ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, 2012ರ ನವೆಂಬರ್‌ 12ರಂದು ದಾಳಿ ಮಾಡಿ ಶೋಧ ನಡೆಸಿದ್ದರು. ಆರೋಪಿಗಳು ₹ 3.46 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.

ಲೋಕಾಯುಕ್ತ ಪೊಲೀಸರು ಆರೋಪಪಟ್ಟಿಯಲ್ಲಿ ನೀಡಿದ್ದ ವಿವರಗಳನ್ನು ಆಧರಿಸಿ ಗೌರಮ್ಮ ದಂಪತಿ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಗೌರಮ್ಮ ಪಾಲಿಕೆ ಸದಸ್ಯೆಯಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿರುವುದು ದೃಢಪಟ್ಟಿದೆ ಎಂದು ಇ.ಡಿ ಹೇಳಿದೆ.

ಗೌರಮ್ಮ ಕುಟುಂಬಕ್ಕೆ ಸೇರಿದ ಮನೆ, ನಿವೇಶನ, ಕೈಗಾರಿಕಾ ನಿವೇಶನ ಮತ್ತು ಕೃಷಿ ಜಮೀನುಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ಮಾಹಿತಿ ನೀಡಿದೆ.

2012ರ ನವೆಂಬರ್‌ 20ರಂದು ಲಿಂಗರಾಜು ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಗೌರಮ್ಮ, ಗೋವಿಂದರಾಜು ಸೇರಿದಂತೆ ಹಲವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ 2020ರಲ್ಲಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT