ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಆಗಮಿಸಲಿದೆ ನವೀನ್‌ ಮೃತದೇಹ

Last Updated 20 ಮಾರ್ಚ್ 2022, 19:29 IST
ಅಕ್ಷರ ಗಾತ್ರ

ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರಿಗೆ ಸೋಮವಾರ ನಸುಕಿನಲ್ಲಿ ಬರಲಿದ್ದು, ನಂತರ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಅಧಿಕಾರಿಗಳು ವ್ಯವಸ್ಥೆ ಮಾಡಿಕೊಂಡಿದ್ದಾರೆ.

'ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಮೃತದೇಹ ತರಲಾಗುತ್ತದೆ. ಅದನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ನಂತರ, ಪೊಲೀಸ್ ಭದ್ರತೆಯಲ್ಲಿ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ’ ಎಂದು ಮೂಲಗಳು ಹೇಳಿವೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಿಗ್ಗೆ 9 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಹೋಗಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಚಳಗೇರಿ ಗ್ರಾಮಕ್ಕೆ ತೆರಳಲಿದ್ದಾರೆ. ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT