ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದೈದು, ಹತ್ತತ್ತು ಓಟ್ ಹಾಕಿದ್ದರೆಂದ ಮುನಿರಾಜು: ಏನಿದು ರಹಸ್ಯ ಎಂದ ಸಿದ್ದರಾಮಯ್ಯ

ಅಕ್ಷರ ಗಾತ್ರ

ಬೆಂಗಳೂರು: ‘ಉಪಚುನಾವಣೆಯೊಂದರಲ್ಲಿ ಸಾವಿರ ಜನ ಕಾರ್ಯಕರ್ತರು ಬಂದು ಐದೈದು, ಹತ್ತತ್ತು ಓಟ್ ಹಾಕಿದ್ದರು’ ಎಂದು ಬಿಜೆಪಿ ಮಾಜಿ ಎಸ್. ಶಾಸಕ ಮುನಿರಾಜು ಹೇಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಈ ಕುರಿತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಏನಿದು ರಹಸ್ಯ? ಅಸಹ್ಯ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಪ್ರಶ್ನಿಸಿದ್ದಾರೆ.

‘ಒಂದು ಸಾವಿರ ಜನ ಕಾರ್ಯಕರ್ತರು ಬಂದು ಐದೈದು, ಹತ್ತತ್ತು ಓಟ್ ಹಾಕಿದ್ರು. ಆ ರೀತಿ ಪಕ್ಷ ಕಟ್ಟಿದ್ದಕ್ಕೆ ಇವತ್ತು 119 ವಿಧಾನಸಭಾ ಸದಸ್ಯರನ್ನು ಇಟ್ಟುಕೊಂಡು ಸರ್ಕಾರ ಮಾಡಿದ್ದೇವೆ.... ಏನಿದು ರಹಸ್ಯ? ಅಸಹ್ಯ?’ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಮುನಿರಾಜು ಮಾತನಾಡಿರುವ ವಿಡಿಯೊ ತುಣುಕನ್ನೂ ಪೋಸ್ಟ್ ಮಾಡಿದ್ದಾರೆ.

‘1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಈಗಿನ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದ್ದಾಗಒಂದು ಸಾವಿರ ಜನ ಕಾರ್ಯಕರ್ತರು ಬಂದು ಐದೈದು, ಹತ್ತತ್ತು ಓಟ್ ಹಾಕಿದ್ರು. ಆ ರೀತಿ ಪಕ್ಷ ಕಟ್ಟಿದ್ದಕ್ಕೆ ಇವತ್ತು 119 ವಿಧಾನಸಭಾ ಸದಸ್ಯರನ್ನು ಇಟ್ಟುಕೊಂಡು ಸರ್ಕಾರ ಮಾಡಿದ್ದೇವೆ’ ಎಂದುಮುನಿರಾಜು ಹೇಳುತ್ತಿರುವುದು ವಿಡಿಯೊದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT