ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದೆ ಸುಮಲತಾ ಅಂಬರೀಷ್ ಆಪ್ತ ಎಸ್‌. ಸಚ್ಚಿದಾನಂದ ಬಿಜೆಪಿಗೆ

Last Updated 28 ನವೆಂಬರ್ 2022, 11:02 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವ ಕಾರ್ಯತಂತ್ರದ ಭಾಗವಾಗಿ ಕೆಪಿಸಿಸಿ ಮಾಜಿ ಸದಸ್ಯ ಎಸ್‌. ಸಚ್ಚಿದಾನಂದ ಸೇರಿ ಹಲವರನ್ನು ಬಿಜೆಪಿಗೆ ಸೋಮವಾರ ಸೇರ್ಪಡೆಗೊಳಿಸಲಾಯಿತು. ಸಚ್ಚಿದಾನಂದ ಅವರು ಸಂಸದೆ ಸುಮಲತಾ ಅವರ ಆಪ್ತ ಬಳಗಕ್ಕೆ ಸೇರಿದವರು.

ಸಚಿವರಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ, ಗೋಪಾಲಯ್ಯ ಅವರ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥನಾರಾಯಣ, ಕಾಂಗ್ರೆಸ್‌ ಮತ್ತು ಜೆಡಿಎಸ್ ಕುಟುಂಬದ ಪಕ್ಷಗಳಾದರೆ, ಬಿಜೆಪಿ ಜನಪರ ಪಕ್ಷ ಎಂದು ಹೇಳಿದರು.

ಮಂಡ್ಯವು ಹಿಂದೆ ಅಭಿವೃದ್ಧಿಗೆ ಹೆಸರುವಾಸಿಯಾಗಿತ್ತು. ಆದರೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಆ ಜಿಲ್ಲೆ ಕುಸಿತ ಕಂಡಿತು. ಆ ಜಿಲ್ಲೆಯಲ್ಲಿ ಜನರಿಂದ ಅವಕಾಶ ಪಡೆದ ಪ್ರತಿನಿಧಿಗಳು ಸಮರ್ಪಕವಾಗಿ ಕೆಲಸ ಮಾಡಲಿಲ್ಲ ಎಂದು ಅವರು ಆಕ್ಷೇಪಿಸಿದರು.

ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಖಾತೆ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, ಕಾಂಗ್ರೆಸ್ಸಿನ ಹಲವಾರು ಮುಖಂಡರು ಪಕ್ಷ ಸೇರಿದ್ದರಿಂದ ಬಿಜೆಪಿ ಇನ್ನಷ್ಟು ಬಲಗೊಂಡಿದೆ. ಇತರ ಪಕ್ಷಗಳ ಭದ್ರಕೋಟೆಯನ್ನು ಒಡೆಯುವ ದೊಡ್ಡ ಶಕ್ತಿ ಇದೀಗ ಬಿಜೆಪಿಗೆ ಬಂದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕನಿಷ್ಠ 7 ಶಾಸಕರ ಸ್ಥಾನಗಳನ್ನು ಗೆಲ್ಲುವುದು ಖಚಿತ. ಜೆಡಿಎಸ್- ಕಾಂಗ್ರೆಸ್ ಪಕ್ಷಕ್ಕೆ ನಾವು ಭಯಪಡಬೇಕಿಲ್ಲ ಎಂದು ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ 2013 ರಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಲ್‌.ಲಿಂಗರಾಜು, ಸ್ಥಳೀಯ ಮುಖಂಡರಾದ ಬಾಬು ಹನುಮಾನ್‌, ಮಲ್ಲಿಕಾರ್ಜುನ (ಫೈಟರ್‌ ರವಿ), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಮಲಿಂಗಯ್ಯ, ಮಮತಾ ಧನಂಜಯ್‌, ನಾಗರತ್ನ ಪ್ರಕಾಶ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅದ್ಯಕ್ಷ ರಾಮೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಂದಮಣಿ ಚಂದ್ರಶೇಖರ್‌, ಯೋಗಾನಂದ ಪಟೇಲ್‌, ಲಕ್ಷ್ಮಮ್ಮ, ಇಂಡುವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಸ್ವಾಮಿ, ಬೇವಿನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಮಹೇಶ್, ಸೂನಗಹಳ್ಳಿ ಗ್ರಾಮ ಪಂಚಾಯಿ ಮಾಜಿ ಅಧ್ಯಕ್ಷ ರಾಮಚಂದ್ರ ಕೆ, ಇಂಡುವಾಳ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಸ್ವಾಮಿ ಪಕ್ಷ ಸೇರಿದ ಪ್ರಮುಖರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT