ಬುಧವಾರ, ಮಾರ್ಚ್ 22, 2023
19 °C

ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ?: ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ‘ನಮ್ಮನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ? ಅವರ ಮನೆ ಬಾಗಿಲಿಗೆ ಹೋಗಿ ನಿಂತಿದ್ದೇವೆಯೇ? ಯಾರ ಜೊತೆಗಾದರೂ ಮಾತುಕತೆ ನಡೆಸಿದ್ದೇವೆಯೇ?’ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಪದೇಪದೇ ದ್ರೋಹ ಎಸಗುವವರನ್ನು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಅವರೇ ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಿ ಕಾಂಗ್ರೆಸ್‌ಗೆ ಬಂದ ಗಿರಾಕಿ. ಡಿ.ಕೆ.ಶಿವಕುಮಾರ್‌ ಹಾಗೂ ಅವರ ನಡುವಿನ ಸಂಬಂಧ ಸರಿ ಇಲ್ಲ. ಅದನ್ನು ಮುಚ್ಚಿ ಹಾಕಿಕೊಳ್ಳಲು ನಮ್ಮ ವಿಚಾರವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿದ್ದಾರೆ. ಇಬ್ಬರೂ ಹೊಸ ಆಟವಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು