ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 9 ಕ್ಕೆ ಸಭಾಪತಿ ಚುನಾವಣೆ

ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ ಸಾಧ್ಯತೆ
Last Updated 5 ಫೆಬ್ರುವರಿ 2021, 18:53 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್‌ನ ನೂತನ ಸಭಾಪತಿ ಆಯ್ಕೆ ಇದೇ 9 ರಂದು ನಡೆಯಲಿದ್ದು, ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಖಚಿತವಾಗಿದೆ.

ಸಭಾಪತಿ ಹುದ್ದೆಗೆ ಪ್ರತಾಪಚಂದ್ರ ಶೆಟ್ಟಿ ಗುರುವಾರ ರಾಜೀನಾಮೆ ನೀಡಿದ ಕಾರಣ ಶುಕ್ರವಾರ ಬೆಳಿಗ್ಗೆ ತುರ್ತು ಸಚಿವ ಸಂಪುಟ ಸಭೆ ನಡೆಸಿ ಸಭಾಪತಿ ಚುನಾವಣೆ ಮತ್ತು ವಿಧಾನಪರಿಷತ್‌ ಕಲಾಪ ಮೂರು ದಿನಗಳ ಕಾಲ ವಿಸ್ತರಿಸಲು ತೀರ್ಮಾನಿಸಲಾಯಿತು. ಆದರೆ, ವಿಧಾನಸಭೆ ಕಲಾಪ ಶುಕ್ರವಾರ ಅನಿರ್ಧಿಷ್ಟ ಅವಧಿಗೆ ಮುಂದೂಡಲಾಯಿತು.

‘ವಿಧಾನ ಪರಿಷತ್‌ ನೂತನ ಸಭಾಪತಿ ಆಯ್ಕೆ ಫೆ. 9ರಂದು ನಡೆಯಲಿದೆ. ಫೆ. 8ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ’ ಎಂದು ವಿಧಾನಪರಿಷತ್‌ ಕಾರ್ಯದರ್ಶಿ ಕೆ.ಆರ್‌. ಮಹಾಲಕ್ಷ್ಮಿ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣ, ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರು ಚರ್ಚೆಗೆ ಅವಕಾಶ ಕೊಡದೆ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್‌ ಮಧ್ಯೆ ಒಪ್ಪಂದ ಆಗಿರುವುದರಿಂದ ಬಿಜೆಪಿ ಎಂ.ಕೆ.ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆ ಆಗಿದ್ದಾರೆ. ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಜೆಡಿಎಸ್‌ನಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬಿಎಸಿ ಸಭೆ: ಉಪ ಸಭಾಪತಿ ಎಂ.ಕೆ. ಪ್ರಾಣೇಸಶ್‌ ಅವರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್‌ನ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ಶುಕ್ರವಾರ ಬೆಳಿಗ್ಗೆ ನಡೆಯಿತು. ಈ ಸಭೆಯಲ್ಲಿ ಕಲಾಪವನ್ನು ಫೆ. 10 ರವರೆಗೆ ವಿಸ್ತರಿಸಲು ತೀರ್ಮಾನಿಸಲಾಯಿತು. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಹೊಸಬರ ಆಯ್ಕೆ ಮತ್ತು ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಶುಕ್ರವಾರ ಮುಗಿಯಬೇಕಿದ್ದ ಕಲಾಪವನ್ನು ಮೂರು ದಿನ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT