ಚಿಕ್ಕಬಳ್ಳಾಪುರ: ‘ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ. ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುತ್ತವೆ. ಈ ಸಮುದಾಯಗಳನ್ನು ಎಸ್‌ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಈ ಸಮುದಾಯಗಳನ್ನು ಎಸ್‌ಸಿ ಪಟ್ಟಿಯಲ್ಲಿ ಉಳಿಸಿಕೊಂಡೇ ಕೇಂದ್ರಕ್ಕೆ ಶಿಫಾರಸು ಮಾಡ ಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು
‘ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ನೀಡುತ್ತಿರುವುದನ್ನು ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಿಂಸೆಗೆ ಪ್ರಚೋದಿಸುತ್ತಿದ್ದಾರೆ.ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಂಜಾರ ಸಮುದಾಯವು ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗ ಬಾರದು. ಯಾವುದೇ ವಿಷಯ ಇದ್ದರೂ ಕುಳಿತು ಪರಿಹರಿಸಿಕೊಳ್ಳೋಣ. ಹಿಂಸೆಗೆ ಅವಕಾಶ ಬೇಡ’ ಎಂದು ಮನವಿ ಮಾಡಿದರು.
‘ಪರಿಶಿಷ್ಟ ಜಾತಿಗೆ ಶೇ 3ರಷ್ಟು ಬದಲು ಶೇ 4.5 ಮೀಸಲಾತಿ ಕೊಟ್ಟಿದ್ದೇವೆ. ತಾಂಡಾದ ಜನರಿಗೆ 2 ಲಕ್ಷ ಹಕ್ಕುಪತ್ರ ನೀಡಿದ್ದೇವೆ. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ತಾಂಡಾಗಳಿಗೆ ಮೂಲ ಸೌಲಭ್ಯಗಳನ್ನು ಕೊಟ್ಟಿದ್ದು ಬಿ.ಎಸ್.ಯಡಿಯೂರಪ್ಪ. ಮೊದಲಿನಿಂದಲೂ ಬಿಜೆಪಿ ಬಂಜಾರ ಸಮುದಾಯದ ರಕ್ಷಣೆ ಮಾಡಿದೆ. ಮುಂದೆಯೂ ಮಾಡುತ್ತದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.