ಮಂಗಳವಾರ, ಜನವರಿ 26, 2021
25 °C
ಪ್ರಾಯೋಗಿಕವಾಗಿ ಬಳ್ಳಾರಿ, ಮೈಸೂರಿನಲ್ಲಿ ಆರಂಭ

‘ಸಫಾಯಿ ಕರ್ಮಚಾರಿ ಪುನರ್‌ ಸಮೀಕ್ಷೆ ಶೀಘ್ರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಳ್ಳಾರಿ: ‘ಸಫಾಯಿ ಕರ್ಮಚಾರಿಗಳ ಪುನರ್‌ಸಮೀಕ್ಷೆಯನ್ನು ಬಳ್ಳಾರಿ ಮತ್ತು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುವುದು’ ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್‌.ಹನುಮಂತಪ್ಪ ತಿಳಿಸಿದರು.

‘ಹಿಂದೆ ನಡೆದಿರುವ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ 1,42,291 ಮಂದಿ ಸಫಾಯಿ ಕರ್ಮಚಾರಿಗಳಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಿರಬಹುದು. ಸಮೀಕ್ಷೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರನ್ನಷ್ಟೇ ಪರಿಗಣಿಸಲಾಗಿತ್ತು’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಐದು ವರ್ಷದ ಹಿಂದೆ ರೂಪಿಸಲಾದ ನಿಗಮಕ್ಕೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಸಮರ್ಪಕ ಅನುದಾನ ನೀಡಿಲ್ಲ. ಹಿಂದಿನ ವರ್ಷ ನೀಡಿದ್ದ ₹ 66 ಕೋಟಿ ಅನುದಾನ ಕೋವಿಡ್‌ ಬಿಕ್ಕಟ್ಟಿನಿಂದಾಗಿ ಖರ್ಚಾಗಿಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು