ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಸರಿ ಶಾಲು, ಹಿಜಾಬ್‌ ಧರಿಸಲು ಅವಕಾಶ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

Last Updated 3 ಫೆಬ್ರುವರಿ 2022, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಹೊರತುಪಡಿಸಿ ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಶಿಕ್ಷಣ ಸಂಸ್ಥೆಗಳಲ್ಲಿ ವಿವಾದ ಬೇಡ. ಮತೀಯತೆ ಬಿಟ್ಟು ವಿಶಾಲ ಮನೋಭಾವ ಇರಬೇಕು.ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯವೇ ಹೊರತು ಬೇರೇನೂ ಅಲ್ಲ’ ಎಂದರು.

‘ಶಿಕ್ಷಣ ಸಂಸ್ಥೆಯಲ್ಲಿ ಧರ್ಮ, ಜಾತಿ ಮೀರಿ ಎಲ್ಲರೂ ಒಂದೇ ಎಂಬ ಭಾವನೆ, ಭಾರತ ಮಾತೆಯ ಮಕ್ಕಳು ಎಂಬ ರಾಷ್ಟ್ರ ಪ್ರೇಮ ಇರಬೇಕು. ಪೂಜೆ, ಧಾರ್ಮಿಕ ಕಾರ್ಯಗಳು ದೇವಾಲಯ, ಮಸೀದಿಗೆ ಸೀಮಿತವಾಗಿ ಇರಲಿ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT