ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆ ಮಾರ್ಗಕ್ಕೆ ಅನುಮತಿ: ಸಿ.ಎಂ ಭರವಸೆ

Last Updated 22 ಫೆಬ್ರವರಿ 2023, 22:15 IST
ಅಕ್ಷರ ಗಾತ್ರ

ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಅರಣ್ಯ ಪ್ರದೇಶದಲ್ಲಿ ಕೊಳವೆ ಮಾರ್ಗ ಅಳವಡಿಸಲು ಅಗತ್ಯ ಅನುಮತಿ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಹರತಾಳು ಹಾಲಪ್ಪ, ‘ಅರಣ್ಯ ಇಲಾಖೆಯ ಅಧಿಕಾರಿಗಳು ಕೊಳವೆ ಮಾರ್ಗ ಅಳವಡಿಸಲು ಅನುಮತಿ ಕೊಡುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಪೂರೈಸಲು ಆಗುತ್ತಿಲ್ಲ’ ಎಂದರು. ತೀವ್ರ ಸಮಸ್ಯೆ ಇರುವ ಪ್ರದೇಶಗಳಿಗೆ ನೀರು ಪೂರೈಕೆಗೆ ಕೊಳವೆ ಮಾರ್ಗ ಅಳವಡಿಸಲು ಅನುಮತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಏಕಾಏಕಿ ಆದೇಶ ನೀಡುವುದು ಕಷ್ಟ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT