ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಮುಂದೂಡಿಕೆ: ಎಸ್‌.ಟಿ. ಸೋಮಶೇಖರ್‌

Last Updated 11 ನವೆಂಬರ್ 2021, 7:37 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

‘20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿ. 10ರಂದು ಚುನಾವಣೆ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ, ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಪ್ರತಿ ವರ್ಷ ನವೆಂಬರ್ 14ರಿಂದ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT