ಗುರುವಾರ , ಫೆಬ್ರವರಿ 25, 2021
19 °C
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಹೇಳಿಕೆ

ಕನ್ನಡ ಸಾಹಿತ್ಯ ಸಮ್ಮೇಳನ: ರೋಗಗಳ ಬಗ್ಗೆಯೂ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿರೋಗಗಳು ಮತ್ತು ಆರೋಗ್ಯಯುತ ಜೀವನಕ್ರಮ ಅಳವಡಿಕೆಗೆ ಸಂಬಂಧಿಸಿದಂತೆ ಕೂಡ ಚರ್ಚೆ ನಡೆಯಲಿದೆ.

ಹಾವೇರಿಯಲ್ಲಿ ಮುಂಬರುವ ಫೆ.26ರಿಂದ ಫೆ.28ರವರೆಗೆ ಸಮ್ಮೇಳನ ನಡೆಯಲಿದೆ. ಕೋವಿಡ್‌ ಕಾಯಿಲೆಯು ಜನರ ಜೀವನ ವಿಧಾನದಲ್ಲಿ ಬದಲಾವಣೆ ತಂದ ಕಾರಣ ಕನ್ನಡ ಸಾಹಿತ್ಯ ಪರಿಷತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಗೋಷ್ಠಿ ನಡೆಸಲು ನಿರ್ಧರಿಸಿದೆ. ಕಲಬುರ್ಗಿಯಲ್ಲಿನಡೆದ 85ನೇ ಸಾಹಿತ್ಯ ಸಮ್ಮೇಳದಲ್ಲಿ 23 ಗೋಷ್ಠಿಗಳು ನಡೆದಿದ್ದವು. ಈ ಬಾರಿ ಕೂಡ ಅಷ್ಟೇ ಗೋಷ್ಠಿಗಳನ್ನು ನಡೆಸಲು ಪರಿಷತ್ತು ಮುಂದಾಗಿದ್ದು, ಸಮ್ಮೇಳನಕ್ಕೆ ಮೂರು ವೇದಿಕೆಗಳನ್ನು ಗುರುತಿಸಿದೆ.

‘ಕೋವಿಡ್‌ ಕಾಣಿಸಿಕೊಂಡ ಬಳಿಕ ಆರೋಗ್ಯದ ಮಹತ್ವ ಅರಿವಿಗೆ ಬಂದಿದೆ. ಆರೋಗ್ಯ ಮತ್ತು ಆಹಾರ ಕ್ರಮದ ಬಗ್ಗೆ ಇನ್ನಷ್ಟು ಚರ್ಚೆಗಳು ನಡೆಯಬೇಕಿದೆ. ಹಾಗಾಗಿ ಈ ಬಾರಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಗೋಷ್ಠಿ ನಡೆಸಲು ಮುಂದಾಗಿದ್ದೇವೆ. ತಜ್ಞ ವೈದ್ಯರು ಹಾಗೂ ವೈದ್ಯ ಸಾಹಿತಿಗಳನ್ನು ಆಹ್ವಾನಿಸಲಾಗುವುದು. ಉಳಿದಂತೆ ನಾಡು–ನುಡಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಮೇಲೆ ಗೋಷ್ಠಿಗಳು ನಡೆಯುತ್ತವೆ. ವಿಷಯಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರ ಸಮ್ಮುಖದಲ್ಲಿ ಎರಡು ಪೂರ್ವ ಸಿದ್ಧತಾ ಸಭೆ ನಡೆದಿದೆ. ಖರ್ಚು ವೆಚ್ಚ ಇಲ್ಲದ ಕೆಲಸಗಳನ್ನು ಈಗ ಮಾಡಲಾಗುತ್ತಿದೆ. ವೇದಿಕೆಯ ಸ್ಥಳ ಹಾಗೂ ವಸತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗಿದೆ’ ಎಂದು ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು