ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಪರಿಷ್ಕರಣೆ: 2ರಂದು ತೀರ್ಮಾನ -ಲಕ್ಷ್ಮಣ ಸವದಿ

Last Updated 30 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರದ ಸಂದರ್ಭದಲ್ಲಿ ಇರಿಸಿದ್ದ ಪ್ರಮುಖ ಬೇಡಿಕೆ 6ನೇ ವೇತನ ಆಯೋಗದಂತೆ ವೇತನ ನೀಡುವ ಬಗ್ಗೆ ಏಪ್ರಿಲ್ 2ರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಸಾರಿಗೆ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

’ಮತ್ತೆ ಮುಷ್ಕರ ನಡೆಸುವುದಾಗಿ ನೌಕರರ ಸಂಘಟನೆ ತಿಳಿಸಿದೆ. ಸಂಘಟನೆ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದೇವೆ’ ಎಂದು ಇಲ್ಲಿ ತಿಳಿಸಿದರು.

ಕರ್ತವ್ಯಕ್ಕೆ ಗೈರಾದರೆ ವೇತನ ಕಡಿತ:ಮುಷ್ಕರಕ್ಕೆ ಸಾರಿಗೆ ನೌಕರರು ಪಟ್ಟುಹಿಡಿರುವ ಬೆನ್ನಲೇ ಕರ್ತವ್ಯಕ್ಕೆ ಗೈರಾಗುವವರ ವೇತನ ಕಡಿತಗೊಳಿಸಿ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಕೆಎಸ್ಆರ್‌ಟಿಸಿ ನೀಡಿದೆ. ‘ಏಪ್ರಿಲ್ 7ರಿಂದ ಬಸ್‌ಗಳ ಕಾರ್ಯಾಚರಣೆ ಸಾಮಾನ್ಯ ಸ್ಥಿತಿಗೆ ಬರುವ ತನಕ ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಆದೇಶದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT