ಗುರುವಾರ , ಡಿಸೆಂಬರ್ 1, 2022
21 °C

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ತಿಂಗಳ ಮೊದಲ ದಿನವೇ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಚಾಲಕರು ಹಾಗೂ ನಿರ್ವಾಹಕರಿಗೆ 65 ವರ್ಷಗಳ ಬಳಿಕ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ.

ನಿಗಮದ 36 ಸಾವಿರ ಚಾಲಕರು ಹಾಗೂ ನಿರ್ವಾಹಕರ ಬ್ಯಾಂಕ್‌ ಖಾತೆಗೆ ಅಕ್ಟೋಬರ್‌ 1ರಂದು ವೇತನ ನೀಡಲಾಗಿದೆ.
1957ರಿಂದ (ಅಂದಿನ ಮೈಸೂರು ಸರ್ಕಾರ ರಸ್ತೆ ಸಾರಿಗೆ ಇಲಾಖೆ) ಇದುವರೆಗೆ ಚಾಲಕರು ಹಾಗೂ ನಿರ್ವಾಹಕರಿಗೆ ಪ್ರತಿ ತಿಂಗಳ 7ರಂದು ವೇತನ ಪಾವತಿ ಆಗುತ್ತಿತ್ತು.

ತಾಂತ್ರಿಕ ಸಿಬ್ಬಂದಿಗೆ ಆಯಾ ತಿಂಗಳ 4ರಂದು ಹಾಗೂ ಅಧಿಕಾರಿಗಳು, ಆಡಳಿತ ಸಿಬ್ಬಂದಿಗೆ 1ರಂದು ವೇತನ ನೀಡಲಾಗುತ್ತಿತ್ತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸೂಚನೆಯಂತೆ ಚಾಲಕರಿಗೆ ವೇತನ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು