ಗುರುವಾರ , ಜನವರಿ 21, 2021
21 °C
ಧರ್ಮೇಗೌಡ ಆತ್ಮಹತ್ಯೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌

ಪರಿಷತ್‌ ಗಲಾಟೆ, ಧರ್ಮೇಗೌಡ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಸಲೀಂ ಅಹ್ಮದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ವಿಧಾನ ಪರಿಷತ್‌ನಲ್ಲಿ ನಡೆದ ಘಟನೆ ಹಾಗೂ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಪಾದಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾನೂನು– ನಿಯಮಾವಳಿ ಉಲ್ಲಂಘಿಸಿ ಸಭಾಧ್ಯಕ್ಷರನ್ನು ಕೆಳಗಿಳಿಸುವ ತರಾತುರಿ ಸರ್ಕಾರಕ್ಕೆ ಏಕೆ ಬೇಕಿತ್ತು? ಉಪಸಭಾಪತಿಗಳಿಗೆ ಮಧ್ಯರಾತ್ರಿ ಕರೆ ಮಾಡಿ ಸಭಾಪತಿಗಳ ಪೀಠವನ್ನು ಅಲಂಕರಿಸುವಂತೆ ಹೇಳಿದ್ದು ಯಾಕೆ?’ ಎಂದು ಪ್ರಶ್ನಿಸಿದರು. 

‘ಸಭಾಪತಿಗಳ ಅನುಮತಿ ಇಲ್ಲದೇ ಸದನಕ್ಕೂ ಯಾರೂ ಕಾಲಿಡುವುದಿಲ್ಲ. ಇದು ಸಂಸ್ಕೃತಿ. ಆದರೆ, ಅಂತಹ ಸಭಾಪತಿಗಳೇ ಬಾರದ ಹಾಗೆ ಬೀಗ ಹಾಕಿದ್ದು ಯಾಕೆ? ಖುದ್ದು ಉಪಮುಖ್ಯಮಂತ್ರಿ ಮತ್ತು ಕಾನೂನು ಸಚಿವರೇ ಕಾನೂನು ಉಲ್ಲಂಘಿಸಿದ್ದು ಖೇದಕರ’ ಎಂದು ವಿಷಾದಿಸಿದರು.

‘ಸದನದ ಘಟನೆಯಿಂದ ದೇಶದಲ್ಲೇ ತಲೆತಗ್ಗಿಸುವಂತಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾನು ಕಾಂಗ್ರೆಸ್‌ ಸದಸ್ಯರನ್ನು ಸಮರ್ಥಿಸಿಕೊಳ್ಳುತ್ತಿಲ್ಲ. ಆದರೆ, ಈ ಬೆಳವಣಿಗೆಗೆ ಸರ್ಕಾರವೇ ನೇರ ಹೊಣೆ’ ಎಂದು ಅವರು ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು