ಬೆಂಗಳೂರು: ಉತ್ತರ ಪ್ರದೇಶದ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆನಡೆಯುತ್ತಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಬೆಂಬಲಿಸಿದೆ.

ಈ ಕುರಿತು ಶನಿವಾರ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಮತ್ತು ಎಚ್.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಬಿನ್ ಮಾಥ್ಯುಸ್, 'ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಘಟಕವು ಜೆಡಿಎಸ್ ಅನ್ನು ಬೇಷರತ್ ಬೆಂಬಲಿಸುತ್ತಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಆಭ್ಯರ್ಥಿಗಳ ಗೆಲುವಿಗೆ ಎಸ್‌ಪಿ ಶ್ರಮಿಸಲಿದೆ,’ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಜೆಡಿಎಸ್ ರಾಜ್ಯ ಘಟಕ, 'ಸಮಾಜವಾದಿ ಪಕ್ಷವು ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದೆ. ಸಮಾಜವಾದಿ ಪಕ್ಷದ ಬೆಂಬಲಕ್ಕೆ ನಮ್ಮ ಕೃತಜ್ಞತೆಗಳು,’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.