ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಜಮ್ಮ ಜೋಗತಿ ಸೇರಿ 10 ಮಂದಿಗೆ ‘ಸಂಸ್ಕೃತಿ ಸಿರಿ ಪ್ರಶಸ್ತಿ’

Last Updated 14 ಡಿಸೆಂಬರ್ 2021, 19:05 IST
ಅಕ್ಷರ ಗಾತ್ರ

ಬೆಂಗಳೂರು: ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ, ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಸೇರಿದಂತೆ ಹತ್ತು ಮಂದಿ ಆಯ್ಕೆಯಾಗಿದ್ದಾರೆ.

ಜಾನಪದ ಗಾಯಕ ಬಾನಂದೂರು ಕೆಂಪಯ್ಯ, ಸುಗಮ ಸಂಗೀತ ಗಾಯಕ ವೈ.ಕೆ. ಮುದ್ದುಕೃಷ್ಣ, ಲೇಖಕಿ ಲೀಲಾ ಸಂಪಿಗೆ, ಸುಗಮ ಸಂಗೀತ ಕಲಾವಿದೆ ರೋಹಿಣಿ ಮೋಹನ್, ಛಾಯಾಗ್ರಾಹಕ ಸಿರಿಗಂಧ ಶ್ರೀನಿವಾಸಮೂರ್ತಿ, ರಂಗಸಂಘಟಕ ಕೆ. ರೇವಣ್ಣ, ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಹಾಗೂ ನಿರೂಪಕಿ ವತ್ಸಲಾ ಮೋಹನ್ ಅವರೂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

‘ಇದೇ ಭಾನುವಾರ (ಡಿ.19) ಬೆಳಿಗ್ಗೆ 10 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಪುನೀತ್‌ ರಾಜ್‌ಕುಮಾರ್ ಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸೃಷ್ಟಿ ನಿರಂತರ ತಂಡದಿಂದ ಗೀತನಮನ ನಡೆಯಲಿದೆ. ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಬಹುಭಾಷಾ ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ವೇಮಗಲ್ ನಾರಾಯಣಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಆನಂದ ಮಾದಲಗೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT