ಮೂಡುಬಿದಿರೆ (ದಕ್ಷಿಣ ಕನ್ನಡ): ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಇದೇ 21ರಿಂದ 27ರವರೆಗೆ ಇಲ್ಲಿ ನಡೆಯಲಿದೆ. ಇದಕ್ಕೆ ನಿಗದಿತ ಅನುದಾನನ್ನು ತಕ್ಷಣ ಬಿಡುಗಡೆ ಮಾಡುವುದರ ಜೊತೆಗೆ ಹೆಚ್ಚುವರಿ ಅನುದಾನವನ್ನು ನೀಡಬೇಕು ಎಂದು ಕಾರ್ಯಕ್ರಮದ ಸಂಘಟಕ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಕೋರಿದರು.
ಜಾಂಬೂರಿಗೆ ಅಂದಾಜು ₹35 ಕೋಟಿ ವೆಚ್ಚವಾಗಲಿದೆ. ರಾಜ್ಯ ಸರ್ಕಾರ ₹10 ಕೋಟಿ ಅನುದಾನ ನೀಡಲು ನಿರ್ಧರಿಸಿದೆ. ವಿವಿಧದೇಶ, ರಾಜ್ಯಗಳ 50 ಸಾವಿರ ಮಕ್ಕಳು, 10 ಸಾವಿರ ತರಬೇತು ದಾರರು ಪಾಲ್ಗೊಳ್ಳಲಿದ್ದಾರೆಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ದೇಶದಲ್ಲಿ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಇದಾಗಿದೆ. ಹಲವು ವಿಷಯಗಳಲ್ಲಿ ಇದು ಜಾಗತಿಕ ದಾಖಲೆಯನ್ನು ಬರೆಯಲಿದೆ. ಇದೇ ಮೊದಲ ಬಾರಿಗೆ ಜಾಂಬೂರಿಯಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ಹಾಸ್ಟೆಲ್‌ಗಳಲ್ಲಿಯೇ ವಸತಿ ಹಾಗೂ ಸಾಮೂಹಿಕ ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.
ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಕಾರ‘ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಬೋಧನೆ, ದೇಶದ ವಿವಿಧ ಭಾಗಗಳ ಶಾಸ್ತ್ರೀಯ ಜನಪದ ಕಲೆಯ ಪರಿಚಯ, ಜಂಗಲ್ ಟ್ರಯಲ್. ಸಾಹಿತ್ಯ ಚಟುವಟಿಕೆ, ಸಿಡಿಮದ್ದು ಪ್ರದರ್ಶನ, ಯೋಗಾಥಾನ್ ನಡೆಯಲಿದೆ. ಎಲ್ಲ ಮಕ್ಕಳಿಗೆ ₹750 ಮೌಲ್ಯದ ವೆಲ್‌ಕಂ ಕಿಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿಜ್ಞಾನ, ಆಹಾರ, ಕಲಾ, ಕೃಷಿ, ಪುಸ್ತಕ ಮೇಳಗಳನ್ನು ನಡೆಸಲಾಗುತ್ತಿದೆ. ಮೂಡುಬಿದಿರೆ ಸುತ್ತಮುತ್ತಲಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು ಎಂದು ವಿವರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.