ಗುರುವಾರ , ಫೆಬ್ರವರಿ 25, 2021
19 °C

ಜ. 4ರಿಂದ 'ಸಂವೇದ ಪಾಠ' ಮರು ಪ್ರಸಾರ: ಸಚಿವ ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂವೇದಾ ಪಾಠಗಳು–ಚಿತ್ರ ಕೃಪೆ: ದೂರದರ್ಶನ ಯುಟ್ಯೂಬ್‌ ವಿಡಿಯೊ

ಬೆಂಗಳೂರು: ‘ಕೋವಿಡ್ ಸೋಂಕು ಕಾರಣ ಶಾಲೆಗಳಲ್ಲಿ ತರಗತಿಗಳು ಆರಂಭ ಆಗದೇ ಇರುವುದರಿಂದ ದೂರದರ್ಶನ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಯ ಸಂವೇದ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಈ ತರಗತಿಗಳಿಗೆ ಚಂದನಾ ವಾಹಿನಿಯಲ್ಲಿ ಕಳೆದ ಜುಲೈ 20ರಿಂದ ಪ್ರಸಾರವಾದ ಪಾಠಗಳು 2021ರ ಜ. 1ಕ್ಕೆ ಪೂರ್ಣಗೊಳ್ಳಲಿವೆ. ಜ. 1ರಿಂದ 10ನೇ ತರಗತಿಗೆ ಶಾಲಾ ತರಗತಿಗಳು ಮತ್ತು 6ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗುತ್ತಿವೆ. ಇದರ ಜೊತೆಗೆ, ಮಕ್ಕಳ ಕಲಿಕೆ ಹಿತದೃಷ್ಟಿಯಿಂದ ಚಂದನಾ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಗಳಿಗೆ ಪ್ರಸಾರವಾಗುತ್ತಿದ್ದ ಪಾಠಗಳನ್ನು ಜ. 4ರಿಂದ ಮರು ಪ್ರಸಾರ ಮಾಡಲಾಗುವುದು’ ಎಂದೂ ಅವರು ಹೇಳಿದ್ದಾರೆ.

‘ಚಂದನಾ ವಾಹಿನಿಯಲ್ಲಿ ಪಾಠಗಳು ಪ್ರಸಾರವಾಗುತ್ತಿರುವುದರಿಂದ ಉತ್ತೇಜಿತವಾಗಿರುವ ಜಿಯೋ ವಾಹಿನಿಯವರು 5ರಿಂದ 10ನೇ ತರಗತಿಯ ವಿಡಿಯೊ ಪಾಠಗಳನ್ನು ಉಚಿತವಾಗಿ ಪ್ರಸಾರ ಮಾಡಲು ಮುಂದೆ ಬಂದಿದ್ದು ಈ ಕುರಿತು ಕ್ರಮ ವಹಿಸಲಾಗುತ್ತಿದೆ. ಸದ್ಯದಲ್ಲೆ ಜಿಯೊ ವಾಹಿನಿ ಮೂಲಕ ಪ್ರಸಾರವಾಗುವ ತರಗತಿಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.

‘1ರಿಂದ 4ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಹಿತದೃಷ್ಟಿಯಿಂದ ರೇಡಿಯೊ ಪಾಠಗಳನ್ನು ಸಿದ್ಧಪಡಿಸಲಾಗುತ್ತಿದೆ. ಜನವರಿ ಎರಡನೇ ವಾರದಿಂದ ಆಕಾಶವಾಣಿಯ 13 ಕೇಂದ್ರಗಳ ಮೂಲಕ ಈ ರೇಡಿಯೊ ಪಾಠಗಳನ್ನು ಪ್ರಸಾರ ಮಾಡಲಾಗುವುದು’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು