ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ 'ಸಂವಿಧಾನ ಶಿಲ್ಪಿ' ಎಂಬುದನ್ನು ಪಠ್ಯದಿಂದ ತೆಗೆಯಲಾಗಿದೆ: ಕಾಂಗ್ರೆಸ್‌

ಅಕ್ಷರ ಗಾತ್ರ

ಬೆಂಗಳೂರು: ಡಾ. ಬಿ.ಆರ್‌ ಅಂಬೇಡ್ಕರ್‌ ಅವರಿಗಿರುವ ‘ಸಂವಿಧಾನ ಶಿಲ್ಪಿ’ ಎಂಬ ಬಿರುದನ್ನು ಪರಿಷ್ಕೃತ ಪಠ್ಯದಲ್ಲಿ ಕಿತ್ತೆಸೆಯಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಮತ್ತು ಪ್ರಸ್ತುತ ಸಮಿತಿಯ ಪಠ್ಯವನ್ನು ಹೋಲಿಕೆ ಮಾಡಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಸಂವಿಧಾನ ಶಿಲ್ಪಿ’ ಎಂಬ ಉಲ್ಲೇಖ ಕೈಬಿಟ್ಟಿರುವುದನ್ನು ಎತ್ತಿ ತೋರಿಸಿದೆ.

’ದಲಿತೋದ್ಧಾರಕರ ರೀತಿ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಗರ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಸಮಾನತೆಗಾಗಿ ಹಗಲಿರುಳು ದುಡಿದು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನ ನೀಡಿದ ಬಾಬಾಸಾಹೇಬರನ್ನು ಸಂವಿಧಾನ ಶಿಲ್ಪಿ ಎನ್ನಲು ಅಂಜಿಕೆ ಅಳುಕು ಇವರಿಗೆ. ದಲಿತ ನಾಯಕ ಸಂವಿಧಾನ ಶಿಲ್ಪಿ ಆದರೆಂಬ ಅಸಹನೆಯೇ ಈ ಬಿಜೆಪಿಯವರಿಗೆ’ ಎಂದು ಪ್ರಶ್ನೆ ಮಾಡಿದೆ.

ಈ ಟ್ವೀಟ್‌ನ ಜೊತೆಗೆ #ದಲಿತವಿರೋಧಿಬಿಜೆಪಿ ಎಂಬ ಹ್ಯಾಷ್‌ ಟ್ಯಾಗ್‌ ಅನ್ನೂ ಸೇರಿಸಲಾಗಿದೆ.

ರೋಹಿತ್‌ ಚಕ್ರತೀರ್ಥ ಎಂಬುವರ ನೇತೃತ್ವದಲ್ಲಿ ರಚಿಸಲಾಗಿದ್ದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯ ಈಗಾಗಲೇ ಭಾರಿ ವಿವಾದಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT