ಬಾಗಲಕೋಟೆ: ಇಳಕಲ್ನ ಚಿತ್ತರಗಿ ವಿಜಯಮಹಾಂತೇಶ ಸಂಸ್ಥಾನಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಶನಿವಾರ ಸಂಯಮ ಪ್ರಶಸ್ತಿ ಪ್ರದಾನ ಮಾಡಿದರು.

ಇಲ್ಲಿನ ಬಿ.ವಿ.ವಿ ಸಂಘದ ಸಭಾಭವನದಲ್ಲಿರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಡೆದ ಸಮಾರಂಭದಲ್ಲಿ ಶ್ರೀಗಳಿಗೆ ₹1 ಲಕ್ಷ ನಗದು ಹಾಗೂ ಫಲಕ ನೀಡಿ ಗೌರವಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಗಳು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮಠದ ಹಿರಿಯ ಶ್ರೀಗಳು ಆರಂಭಿಸಿದ್ದ ಮಹಾಂತ ಜೋಳಿಗೆಯ ಕಾರ್ಯವನ್ನು ಮುಂದುವರೆಸಿಕೊಂಡು ಹೋಗುವುದಾಗಿ ಹೇಳಿದರು. ತಮಗೆ ದೊರೆತ ಬಹುಮಾನದ ಮೊತ್ತವನ್ನು ಸ್ವಾಮೀಜಿ ಇಳಕಲ್ನ ಆಯುರ್ವೇದ ಆಸ್ಪತ್ರೆಗೆ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ನಿಡಸೋಸಿ ಮಠದ ಶಿವಲಿಂಗೇಶ್ವರ ಶ್ರೀಗಳು, ಶಿರೂರಿನ ಬಸವಲಿಂಗ ಸ್ವಾಮೀಜಿ, ಲಿಂಗಸಗೂರಿನ ಸಿದ್ದಲಿಂಗ ಶ್ರೀ, ಗುಳೇದಗುಡ್ಡದ ಗುರುಬಸವ ದೇವರ, ಜಮಖಂಡಿ ಹುನ್ನೂರಿನ ಈಶ್ವರ ಮಂಟೂರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹನಮಂತ ಕೊಟಬಾಗಿ, ಕಾರ್ಯದರ್ಶಿ ಎಸ್.ಶಂಕರಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.