ಭಾನುವಾರ, ಸೆಪ್ಟೆಂಬರ್ 26, 2021
28 °C

ಡ್ರಗ್ಸ್‌‌ ಪ್ರಕರಣ: ಪೊಲೀಸರಿಂದ‌ ಚಾರ್ಜ್‌ಶೀಟ್, ಅನುಶ್ರೀ‌ ಹೆಸರು ಉಲ್ಲೇಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಾದಕ‌ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ‌ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಹೆಸರು ಉಲ್ಲೇಖ ಮಾಡಲಾಗಿದೆ.

ಮಂಗಳೂರು ಸಿಸಿಬಿ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಹೆಸರು ಇದ್ದು, ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹೇಳಿಕೆ ಆಧರಿಸಿ ಈ ಉಲ್ಲೇಖ ಮಾಡಲಾಗಿದೆ.

ಆ್ಯಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜೊತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎರಡನೇ  ಆರೋಪಿ ಕಿಶೋರ್​ ಅಮನ್​ ಶೆಟ್ಟಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಇದನ್ನು ಆಧರಿಸಿ ಚಾರ್ಜ್ ಶೀಟ್ ನಲ್ಲಿ ಹೆಸರು ಪ್ರಸ್ತಾಪಿಸಲಾಗಿದೆ.

ಅವರ ರೂಮ್​ಗೆ ಅನುಶ್ರೀ ಡ್ರಗ್ಸ್ ​ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್​ ಸೇವನೆ ಮಾಡಿದ್ದರು ಎಂದು  ಕಿಶೋರ್ ಶೆಟ್ಟಿ ತಿಳಿಸಿದ್ದಾನೆ.

2007-08ರಲ್ಲಿ ರಿಯಾಲಿಟಿ ಶೋಗೆ ಸಂಬಂಧಿಸಿದಂತೆ ತರುಣ್​ ರೂಮ್​ನಲ್ಲಿ ಅನುಶ್ರೀಗೆ ಡ್ಯಾನ್ಸ್ ತರಬೇತಿ ನೀಡಿದ್ದ. ಈ ಸಂದರ್ಭದಲ್ಲಿ ಅನುಶ್ರೀ ಡ್ರಗ್ಸ್​ ಖರೀದಿಸಿ ತರುತ್ತಿದ್ದರು. ನಮಗೆ ಡ್ರಗ್ಸ್ ನೀಡಿ, ಅನುಶ್ರೀ ಕೂಡ ಊಟದ ಮೊದಲು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಕಿಶೋರ್ ತಿಳಿಸಿದ್ದಾನೆ.

ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮಹತ್ವ‌ ಪಡೆದಿದೆ. ಇದರ‌ ಆಧಾರದಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ.

ಮಾದಕ ವಸ್ತು ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನುಶ್ರೀ ಅವರನ್ನು ಮಂಗಳೂರು ಪೊಲೀಸರು‌ ವಿಚಾರಣೆಗೆ ಒಳಪಡಿಸಿದ್ದರು. ಆದರೆ, ಮತ್ತೆ ವಿಚಾರಣೆಗೆ ಕರೆಸಿರಲಿಲ್ಲ. ಪ್ರಕರಣದಲ್ಲಿ‌ ಅನುಶ್ರೀ ಹೆಸರು ಕೈಬಿಡುವಂತೆ ಪ್ರಭಾವಿ ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ‌ ಕೇಳಿ ಬಂದಿತ್ತು.

ಇದನ್ನೂ ಓದಿ... ಡ್ರಗ್ಸ್‌ ಕೇಸ್‌ನಲ್ಲಿ‌ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು