ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣ: ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Last Updated 16 ಸೆಪ್ಟೆಂಬರ್ 2020, 8:13 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಲಾಗಿದೆ.

ಪ್ರಕರಣದಲ್ಲಿ ಹೊಸದಾಗಿ ನೇಮಕವಾಗಿರುವ ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಅವರು (ಎಸ್‍ಪಿಪಿ) ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿರುವುದರಿಂದ ವಿಚಾರಣೆ ಮುಂದೂಡಿ, ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಾಗಿಣಿ ಇನ್ನೂ ಮೂರು ದಿನ ಜೈಲಿನಲ್ಲೇ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT