ಸಂಡೂರು: ಉಪ ವಲಯ ಅರಣ್ಯ ಅಧಿಕಾರಿ ಆತ್ಮಹತ್ಯೆ

ಹೊಸಪೇಟೆ/ಸಂಡೂರು: ಸಂಡೂರು ಉಪ ವಲಯ ಅರಣ್ಯ ಅಧಿಕಾರಿ ಬಸವರಾಜ ವೀರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಂಗಾವತಿ ತಾಲ್ಲೂಕಿನ ಜಮಾಪುರ ಗ್ರಾಮದ ಬಸವರಾಜ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
'ಭಾನುವಾರ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಸೋಮವಾರ ಘಟನೆಗೆ ಬಗ್ಗೆ ಗೊತ್ತಾಗಿದೆ. ಆತ್ಮಹತ್ಯೆಗೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.