ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಪ್ರತಿಮೆ ವಿವಾದ: ಎಡಿಜಿಪಿಯಿಂದ ಮಾಹಿತಿ ಸಂಗ್ರಹ

Last Updated 28 ಆಗಸ್ಟ್ 2020, 12:11 IST
ಅಕ್ಷರ ಗಾತ್ರ

ಬೆಳಗಾವಿ: ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಅವರು ಶುಕ್ರವಾರ ಪೀರನವಾಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿ ಉಂಟಾಗಿರುವ ರಾಯಣ್ಣ ಪ್ರತಿಮೆ ವಿವಾದದ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಕಾನೂನು–ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲ್ಲಿ ಕನ್ನಡ–ಮರಾಠಿ ಭಾಷಿಕರು ಎಂದೇನಿಲ್ಲ. ಯಾರೇ ತಪ್ಪು ಮಾಡಿದ್ದಾರೊ ಅವರ ವಿರುದ್ಧ ಕ್ರಮವಾಗುತ್ತದೆ. ಪೀರನವಾಡಿಯಲ್ಲಿ ಗುರುವಾರ ಹಾಗೂ ಶುಕ್ರವಾರ ರಾಯಣ್ಣ ಪ್ರತಿಮೆ ಸಂಬಂಧ ಕೆಲವು ಬೆಳವಣಿಗೆಗಳಾಗಿವೆ. ಶುಕ್ರವಾರ ಬೆಳಿಗ್ಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸ್ವಲ್ಪ ತೊಂದರೆ ಆಗಿತ್ತು. ನಗರ ಪೊಲೀಸರು ಭೇಟಿ ನೀಡಿ ಸರಿಪಡಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ತಿಳಿಸಿದರು.

‘ಕಾನೂನು ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಆಗುತ್ತದೆ. ವಿವಾದ ಶಾಂತಿಯುತವಾಗಿ ಬಗೆಹರಿಯುತ್ತದೆ. ಜಿಲ್ಲಾಧಿಕಾರಿ ಎಲ್ಲ ಮುಖಂಡರ ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

‘ಪ್ರತಿಮೆ ಸ್ಥಾಪನೆ ವೇಳೆ ಪೊಲೀಸರು ಸ್ಥಳದಲ್ಲೇ ಇದ್ದರು. ಆದರೂ ಘಟನೆ ಹೇಗಾಗಿದೆ ಎಂಬ ಬಗ್ಗೆ ತಿಳಿದುಕೊಳ್ಳುತ್ತೇನೆ. ಪೊಲೀಸರ ವೈಫಲ್ಯದ ಆರೋಪದ ಬಗ್ಗೆಯೂ ಮಾಹಿತಿ ಪಡೆಯುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT