ಶನಿವಾರ, ಮೇ 21, 2022
19 °C

ಬೆಳಗಾವಿ: ರಾಯಣ್ಣನ ಪ್ರತಿಮೆ ಪುನರ್ ಸ್ಥಾಪನೆ, 22ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಅನಗೋಳದ ಕನಕದಾಸ ಕಾಲೊನಿಯಲ್ಲಿ ಕಿಡಿಗೇಡಿಗಳು ಭಗ್ನಗೊಳಿಸಿದ್ದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ದುರಸ್ತಿಗೊಳಿಸಿ ಭಾನುವಾರ ಮರಳಿ ಅಲ್ಲಿಯೇ ಸ್ಥಾಪಿಸಲಾಯಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ರಾಯಣ್ಣ ಸೇನೆ ಕಾರ್ಯಕರ್ತರು ಪ್ರತಿಮೆ ಸ್ಥಾಪಿಸಿ ಪೂಜೆ ಸಲ್ಲಿಸಿದರು. ಬಡಾವಣೆ ಮುಖ್ಯ ದ್ವಾರದಿಂದ ಮಹಿಳೆಯರು ಕುಂಭಮೇಳದೊಂದಿಗೆ ಮೆರವಣಿಗೆ ನಡೆಸಿದರು. ಕಿತ್ತೂರು ಚನ್ನಮ್ಮ ಹಾಗೂ ರಾಯಣ್ಣನ ಪರ ಘೋಷಣೆಗಳನ್ನು ಕೂಗಿದರು.

ಶನಿವಾರ ನಸುಕಿನಲ್ಲಿ ಪ್ರತಿಮೆ ವಿರೂಪಗೊಳಿಸಿದ ಘಟನೆ ಬಳಿಕ ಪೊಲೀಸರು ಅದನ್ನು ತಮ್ಮ ವಶಕ್ಕೆ ಪಡೆದಿದ್ದರು.

ಕರವೇ ಕಾರ್ಯಕರ್ತರು ಪೊಲೀಸ್‌ ವಶಕ್ಕೆ: ಪ್ರತಿಮೆ ಭಗ್ನಗೊಳಿಸಿದ ಘಟನೆ ವಿರೋಧಿಸಿ ತಾಲ್ಲೂಕಿನ ಪೀರನವಾಡಿ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ  ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

22ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಬೆಳಗಾವಿ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಇದೇ 22ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನ ವಿಸ್ತರಿಸಿ ನಗರ ಪೊಲೀಸ್‌ ಆಯುಕ್ತ ಡಾ.ಕೆ.ತ್ಯಾಗರಾಜನ್‌ ಭಾನುವಾರ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು