ಸಂಸ್ಕೃತ ವಿದ್ವಾಂಸ ಸದಾಶಿವ ಭಟ್ಟ ನಿಧನ

ಶಿರಸಿ: ಹೆಸರಾಂತ ಸಂಸ್ಕೃತ ವಿದ್ವಾಂಸ ಸಿದ್ದಾಪುರ ತಾಲ್ಲೂಕಿನ ನೆಲೆಮಾವಿನ ಸದಾಶಿವ ಭಟ್ಟ (ಶಾಸ್ತ್ರಿ) (93) ಕುಮಟಾ ತಾಲ್ಲೂಕಿನ ಹೊಸಳ್ಳಿಯಲ್ಲಿ ಶುಕ್ರವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಸಂಸ್ಕೃತ ಅಧ್ಯಾಪಕರಾಗಿದ್ದ ಅವರಿಗೆ 2019ರಲ್ಲಿ ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ 'ಮಹಾಮಹೋಪಾಧ್ಯಾಯ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿತ್ತು. ಚಂಪೂಕಾವ್ಯ ಸೇರಿದಂತೆ ಹಲವು ಸಂಸ್ಕೃತ ಗ್ರಂಥಗಳನ್ನು ಅವರು ರಚಿಸಿದ್ದರು. ರಾಜ್ಯದ ಹಲವು ಸಂಸ್ಥೆಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿ ಹೆಸರು ಮಾಡಿದ್ದರು. 1995ರಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಭಾಜನರಾಗಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.