ಬೆಂಗಳೂರು: ತಮ್ಮ ಮನೆಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ (31) ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ:ಪತಿ ಬೇಸರದಿಂದ ಇದ್ದರು: ಸಂತೋಷ್ ಪತ್ನಿ ಹೇಳಿಕೆ

‘ಡಾಲರ್ಸ್ ಕಾಲೊನಿ ನಿವಾಸಿ ಸಂತೋಷ್, ತಮ್ಮ ಮನೆಯಲ್ಲೇ 12 ನಿದ್ರೆ ಮಾತ್ರೆಗಳನ್ನು ನುಂಗಿ ಪ್ರಜ್ಞೆ ಕಳೆದುಕೊಂಡಿದ್ದರು. ಅದನ್ನು ಗಮನಿಸಿದ್ದ ಪತ್ನಿ ಜಾಹ್ನವಿ, ರಾತ್ರಿ 8 ಗಂಟೆ ಸುಮಾರಿಗೆ ಸಂತೋಷ್ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ’ ಎಂದೂ ತಿಳಿಸಿದರು.

‘ತೀವ್ರ ನಿಗಾ ಘಟಕದಲ್ಲಿ ಸಂತೋಷ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಮಾತನಾಡುವ ಸ್ಥಿತಿಯಲ್ಲಿ ಅವರಿಲ್ಲ. ಹೀಗಾಗಿ, ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. 24 ಗಂಟೆ ಬಳಿಕವೇ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ’ ಎಂದೂ ಅಧಿಕಾರಿ ಮಾಹಿತಿ ನೀಡಿದರು.

‘ಯಾವುದೋ ಕಾರಣಕ್ಕೆ ಸಂತೋಷ್ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ರಾಜಕೀಯ ಅಥವಾ ಕೌಟುಂಬಿಕ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿರುವ ಅನುಮಾನವಿದೆ. ಎರಡೂ ಆಯಾಮದಲ್ಲೂ ತನಿಖೆ ಮುಂದುವರಿದಿದೆ’ ಎಂದರು.

ಇದನ್ನೂ ಓದಿ:ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣಗಳೇನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.