ಶನಿವಾರ, ಜನವರಿ 16, 2021
25 °C

ಪತಿ ಬೇಸರದಿಂದ ಇದ್ದರು: ಸಂತೋಷ್‌ ಪತ್ನಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

NR Santhosh

ಬೆಂಗಳೂರು: ‘ನನ್ನ ಪತಿ ನಿನ್ನೆ ಬೆಳಗ್ಗಿನಿಂದಲೇ ಬಹಳ ಬೇಸರದಿಂದ ಇದ್ದರು’ ಎಂದು ಎನ್‌.ಆರ್‌.ಸಂತೋಷ್‌ ಅವರ ಪತ್ನಿ ಜಾಹ್ನವಿ ಹೇಳಿದ್ದಾರೆ.

ಎಂ.ಎಸ್‌.ರಾಮಯ್ಯ ಆಸ್ಪತ್ರೆ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಿನ್ನೆ ಸಂಜೆ ಹೊರಗೆ ಹೋಗಿದ್ದರು. ರಾತ್ರಿ 7 ಗಂಟೆಗೆ ಮನೆಗೆ ಬಂದು ಓದಲು ಹೋಗುತ್ತೇನೆ ಎಂದು ಮಹಡಿಗೆ ಹೋದರು. ಅಡುಗೆ ಏನು ಮಾಡಲಿ ಎಂದು ಕೇಳಲು ಹೋದಾಗಲೂ ಅವರು ಬೇಜಾರದಲ್ಲಿದ್ದರು. ಏನೂ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ’ ಎಂದು ತಿಳಿಸಿದರು.

ಇದನ್ನೂ ಓದಿ: 

‘ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ಕಳೆದುಕೊಂಡರು. ತಕ್ಷಣವೇ ರಾಮಯ್ಯ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದೆವು. ರಾಜಕೀಯದಲ್ಲಿ ಆಗಿರುವ ಏರುಪೇರಿನಿಂದ ಬೇಜಾರಾಗಿದ್ದರು. ಕೌಟುಂಬಿಕವಾಗಿ ನಾವು ಚೆನ್ನಾಗಿಯೇ ಇದ್ದೇವೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ’ ಎಂದು ಜಾಹ್ನವಿ ಹೇಳಿದರು.

‘ನಿದ್ದೆ ಮಾತ್ರೆ ಸೇವಿಸಿದ್ದರಿಂದ ಪ್ರಜ್ಞೆ ತಪ್ಪಿದೆ. ಸರಿ ಹೋಗುತ್ತೆ, ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು