30ರವರೆಗೆ ಸಿಐಡಿ ಕಸ್ಟಡಿಗೆ ಸ್ಯಾಂಟ್ರೊ ರವಿ, ಸಹಚರರು

ಮೈಸೂರು: ಅತ್ಯಾಚಾರ, ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೊ ರವಿ ಹಾಗೂ ಸಹಚರರಾದ ಪ್ರೇಮ್‌ಜಿ, ಶ್ರುತೇಶ್ ಅವರನ್ನು ಜ.30ರವರೆಗೆ ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.
ಇಲ್ಲಿನ 6ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಮಂಗಳವಾರ ಆದೇಶಿಸಿತು. ಆರೋಪಿಗಳನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು, ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಮಾಹಿತಿ ಪಡೆದರು. ಈ ನಡುವೆ, ಸಂತ್ರಸ್ತೆಯು ಸೋಮವಾರ ರಾತ್ರಿ ಇಲ್ಲಿನ ದೇವರಾಜ ಠಾಣೆಗೆ ದೂರು ನೀಡಿದ್ದಾರೆ. ದೇವರಾಜ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ವಾಹನದಲ್ಲಿದ್ದ ಚೆಕ್ ಪುಸ್ತಕ ಕಳುವಾಗಿದೆ. ಆರೋಪಿ ರವಿ, ಸಹಚರ ಪ್ರಕಾಶ್ ಕಾರಣ ಎಂದು ದೂರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.