ಗುರುವಾರ , ಮಾರ್ಚ್ 23, 2023
23 °C
ಮೈಸೂರಿಗೆ ಸಿಐಡಿ ಅಧಿಕಾರಿಗಳ ಭೇಟಿ: ಕಸ್ಟಡಿಗೆ ಪಡೆಯಲು ತಯಾರಿ

ಪಿಎಸ್‌ಐ ಅಕ್ರಮ ತನಿಖಾ ತಂಡಕ್ಕೆ ‘ಸ್ಯಾಂಟ್ರೊ’ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ (51) ವಿರುದ್ಧದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದ್ದು, ಡಿವೈಎಸ್ಪಿ ನೇತೃತ್ವದ ತಂಡ ತನಿಖೆ ಆರಂಭಿಸಿದೆ.

ಮೈಸೂರಿಗೆ ಸೋಮವಾರ ಭೇಟಿ ನೀಡಿದ ಸಿಐಡಿ ಅಧಿಕಾರಿಗಳು, ವಿಜಯನಗರ ಠಾಣೆ ಪೊಲೀಸರಿಂದ ಕಡತಗಳನ್ನು ಸುಪರ್ದಿಗೆ ಪಡೆದುಕೊಂಡರು.

ರಾಜ್ಯದಲ್ಲಿ ಹೆಚ್ಚು ಸುದ್ದಿಯಾಗಿದ್ದ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳ ತಂಡಕ್ಕೆ ಸ್ಯಾಂಟ್ರೊ ರವಿ ಪ್ರಕರಣದ ತನಿಖೆ ಹೊಣೆ ವಹಿಸಲಾಗಿದೆ. ಡಿವೈಎಸ್ಪಿ ನರಸಿಂಹಮೂರ್ತಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಅವರ ತಂಡದಲ್ಲಿ ಇನ್‌ಸ್ಪೆಕ್ಟರ್‌ಗಳು, ಪಿಎಸ್‌ಐಗಳು ಹಾಗೂ ಸಿಬ್ಬಂದಿ ಇದ್ದಾರೆ.

‘ಸ್ಯಾಂಟ್ರೊ ರವಿ ವಿರುದ್ಧ ಮೈಸೂರು ವಿಜಯನಗರ ಠಾಣೆಯಲ್ಲಿ ಜ. 2ರಂದು ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿದ್ದ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಿ ಕರೆತರಲಾಗಿದೆ. ಈತನ ವಿರುದ್ಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರಿಂದ ಮಾಹಿತಿ ಪಡೆಯಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ರವಿ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ, ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪವಿದೆ. ಇದರ ಜೊತೆಯಲ್ಲಿ ವರ್ಗಾವಣೆ ಹಾಗೂ ವೇಶ್ಯಾವಾಟಿಕೆಯೂ ತಳುಕು ಹಾಕಿ ಕೊಂಡಿದೆ. ಎಫ್‌ಐಆರ್‌ನಲ್ಲಿ ದಾಖಲಾ ಗಿರುವ ಅಂಶಗಳ ಜೊತೆಯಲ್ಲಿ ಉಳಿದೆಲ್ಲ ಆಯಾಮಗಳ ಬಗ್ಗೆಯೂ ಮಾಹಿತಿ ಕಲೆಹಾಕಲಾಗುವುದು’ ಎಂದೂ ತಿಳಿಸಿವೆ.

ಕಸ್ಟಡಿಗೆ ಪಡೆದು ವಿಚಾರಣೆ: ‘ರಾಜ್ಯ ಸರ್ಕಾರದ ನಿರ್ದೇಶನದಂತೆ ತನಿಖೆ ಆರಂಭಿಸಲಾಗಿದ್ದು, ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೊ ರವಿ ಯನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ರವಿ ಕಸ್ಟಡಿಗೆ ಸಿಕ್ಕ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಆತ ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿವೆ.

‘ಸಿಐಡಿಗೆ ವರ್ಗ- ಹಲವು ಅನುಮಾನ’: ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೊ ರವಿಯನ್ನು ಬಂಧಿಸುವಲ್ಲಿ ಮೈಸೂರು ಕಮಿಷನರೇಟ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರ ಮಧ್ಯೆಯೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನ ವ್ಯಕ್ತವಾಗಿದೆ.

‘ಪತ್ನಿ ನೀಡಿದ್ದ ದೂರಿನಡಿ ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದೊಂದು ಕೌಟುಂಬಿಕ ಪ್ರಕರಣ. ಇದನ್ನು ಸಿಐಡಿಗೆ ವಹಿಸಿದ್ದು ಹೇಗೆ’ ಎಂಬ ಪ್ರಶ್ನೆಯೂ ಮೂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಐಡಿ ಅಧಿಕಾರಿಯೊಬ್ಬರು, ‘ಪೊಲೀಸ್ ಇಲಾಖೆ ಮುಖ್ಯಸ್ಥರು, ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ನಿರ್ದೇಶಿಸುವ ಎಲ್ಲ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸಬಹುದಾಗಿದೆ’ ಎಂದರು.

‘ವರ್ಗ, ಕೆಲ ರಾಜಕಾರಣಿ ನಂಟು’: ‘ಹಲವು ಪೊಲೀಸ್ ಅಧಿಕಾರಿಗಳಿಂದ ಹಣ ಪಡೆದಿದ್ದ ಸ್ಯಾಂಟ್ರೊ ರವಿ, ಕೆಲ ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರ ಮೂಲಕ ವರ್ಗಾವಣೆ ಮಾಡಿಸಿಕೊಟ್ಟಿರುವ ಮಾಹಿತಿ ಇದೆ. ರಾಜರಾಜೇಶ್ವರಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವರ್ಗಾವಣೆ ಬಗ್ಗೆ ರವಿ ಹೇಳಿಕೆ ನೀಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸಿಐಡಿಗೆ ವರ್ಗ: ಹಲವು ಅನುಮಾನ’
ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೊ ರವಿಯನ್ನು ಬಂಧಿಸುವಲ್ಲಿ ಮೈಸೂರು ಕಮಿಷನರೇಟ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರ ಮಧ್ಯೆಯೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನ ವ್ಯಕ್ತವಾಗಿದೆ.

‘ಪತ್ನಿ ನೀಡಿದ್ದ ದೂರಿನಡಿ ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದೊಂದು ಕೌಟುಂಬಿಕ ಪ್ರಕರಣ. ಇದನ್ನು ಸಿಐಡಿಗೆ ವಹಿಸಿದ್ದು ಹೇಗೆ’ ಎಂಬ ಪ್ರಶ್ನೆಯೂ ಮೂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಐಡಿ ಅಧಿಕಾರಿಯೊಬ್ಬರು, ‘ಪೊಲೀಸ್ ಇಲಾಖೆ ಮುಖ್ಯಸ್ಥರು, ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ನಿರ್ದೇಶಿಸುವ ಎಲ್ಲ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸಬಹುದಾಗಿದೆ’ ಎಂದರು.

‘ವರ್ಗ, ಕೆಲ ರಾಜಕಾರಣಿ ನಂಟು’
‘ಹಲವು ಪೊಲೀಸ್ ಅಧಿಕಾರಿಗಳಿಂದ ಹಣ ಪಡೆದಿದ್ದ ಸ್ಯಾಂಟ್ರೊ ರವಿ, ಕೆಲ ರಾಜಕಾರಣಿಗಳು ಹಾಗೂ ಅವರ ಸಂಬಂಧಿಕರ ಮೂಲಕ ವರ್ಗಾವಣೆ ಮಾಡಿಸಿಕೊಟ್ಟಿರುವ ಮಾಹಿತಿ ಇದೆ. ರಾಜರಾಜೇಶ್ವರಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವರ್ಗಾವಣೆ ಬಗ್ಗೆ ರವಿ ಹೇಳಿಕೆ ನೀಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು