ಶನಿವಾರ, ಏಪ್ರಿಲ್ 1, 2023
23 °C

ಸ್ಯಾಂಟ್ರೋ ರವಿ ಆತ್ಮಹತ್ಯೆ ಯತ್ನ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌  Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇರೆಗೆ ಜೈಲಿನಲ್ಲಿರುವ ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಎಂದು ಕರ್ನಾಟಕ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ ಎಂದು ಬರೆದುಕೊಂಡಿದೆ.

ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಎಂದು ಪ್ರಶ್ನಿಸಿರುವ ಕಾಂಗ್ರೆಸ್‌,  ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಮುಖ್ಯಮಂತ್ರಿ ಬೊಮ್ಮಾಯಿಯವರೇ ಎಂದು ಕಟುವಾಗಿ ಟೀಕಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು