ಶನಿವಾರ, ಏಪ್ರಿಲ್ 1, 2023
28 °C

‘ಸ್ಯಾಂಟ್ರೊ ರವಿ ವಿದೇಶಕ್ಕೆ ಪರಾರಿ ಯತ್ನ’: ಎಚ್‌.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ‘ಮಹಿಳೆಗೆ ಮೋಸ ಮಾಡಿ ಪರಾರಿಯಾಗಿರುವ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಗುಜರಾತ್ ಮೂಲಕ ವಿದೇಶಕ್ಕೆ ಪರಾರಿಯಾಗಲು ಯೋಜನೆ ರೂಪಿಸಿರಬೇಕು‘ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದರು.

ಸ್ಯಾಂಟ್ರೊ ರವಿ ಬಂಧನ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದ ಗಡಿ ದಾಟಲು ಅವನಿಗೆ ಹೇಗೆ ಸಾಧ್ಯವಾಯಿತು. ಯಾರು ಬಿಟ್ಟರು? ಈ ಸಂದರ್ಭದಲ್ಲಿ ಹಾಗೆ ಹೋಗಲು ಸಾಧ್ಯವೇ? ಬಹುಶಃ ಸ್ಯಾಂಟ್ರೊ ರವಿಯನ್ನು ರಕ್ಷಿಸಲು ಗೃಹಸಚಿವರೇ ಆತನೊಂದಿಗೆ ತೆರಳಿರಬೇಕು’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು