ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಪ್ನಾ ಬುಕ್‌ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ

Last Updated 25 ಮೇ 2021, 13:11 IST
ಅಕ್ಷರ ಗಾತ್ರ

ಬೆಂಗಳೂರು: ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ. ಶಾ (84) ಅವರು ಮಂಗಳವಾರ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆಯೇ ಮಧ್ಹಾಹ್ನ 2.15ಕ್ಕೆ ಮೃತಪಟ್ಟಿದ್ದಾರೆ. ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ.

ಬುಧವಾರ ಬೆಳಿಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.ಸುರೇಶ್ ಶಾ ಅವರು 1966ರಲ್ಲಿ ಸಪ್ನಾ ಬುಕ್ ಹೌಸ್ ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT