ಸೋಮವಾರ, ಜುಲೈ 4, 2022
24 °C

ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರಿಗೆ ಕೊರೊನಾವೈರಸ್‌ ಸೋಂಕು ದೃಢಪಟ್ಟಿದ್ದು, ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

‘ಕೋವಿಡ್‌–19 ಮಾತ್ರವಲ್ಲದೆ, ಡಯಾಬಿಟಿಸ್‌, ಅಧಿಕ ರಕ್ಷದೊತ್ತಡ ಮತ್ತು ಥೈರಾಯ್ಡ್‌ ಹಾರ್ಮೋನ್‌ ಉತ್ಪತ್ತಿ ಕೊರತೆ, ತೀವ್ರ ನ್ಯುಮೋನಿಯಾದಿಂದ ಬಳಲುತ್ತಿರುವ ಶಶಿಕಲಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಅಳಿಯ ಟಿಟಿವಿ ದಿನಕರನ್‌ ಗುರುವಾರ ತಿಳಿಸಿದ್ದರು.

63 ವರ್ಷದ ಶಶಿಕಲಾ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ನಿಕಟವರ್ತಿಯಾಗಿದ್ದರು. ಸದ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರ ಶಿಕ್ಷೆ ಅವಧಿ ಜನವರಿ 27 ರಂದು ಪೂರ್ಣಗೊಳ್ಳಲಿದೆ.

ಇವನ್ನೂ ಓದಿ
ವಿ.ಕೆ ಶಶಿಕಲಾ ಜ.27ಕ್ಕೆ ಬಿಡುಗಡೆ: ತಮಿಳುನಾಡು ರಾಜಕೀಯ ವಲಯದಲ್ಲಿ ಕುತೂಹಲ
ಜ್ವರ, ಉಸಿರಾಟ ಸಮಸ್ಯೆ: ವಿ.ಕೆ ಶಶಿಕಲಾ ಆಸ್ಪತ್ರೆಗೆ ದಾಖಲು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು