ಶುಕ್ರವಾರ, ಜನವರಿ 22, 2021
25 °C
ಸಿದ್ದರಾಮಯ್ಯ, ಶಿವಕುಮಾರ್ ಆದ ಮೇಲೆ ನಮ್ಮ ಸರದಿ

‘ಸಿ.ಎಂ ಸ್ಥಾನಕ್ಕೆ ಹಲವರು ಕ್ಯೂನಲ್ಲಿದ್ದಾರೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಇನ್ನೂ ಹಲವರು ಕ್ಯೂನಲ್ಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ನಗರಕ್ಕೆ ಬಂದ ಅವರು ನವನಗರದ ಹೆಲಿ‍ಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಇದೆ’ ಎಂದು ಸಚಿವ ಶ್ರೀರಾಮುಲು ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಜಾರಕಿಹೊಳಿ, ‘ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳುತ್ತಾರೆ. ಕೆಲವರು ಹೇಳುವುದಿಲ್ಲ ಅಷ್ಟೇ. ಸಿದ್ದರಾಮಯ್ಯ, ಶಿವಕುಮಾರ್ ಆದ ಮೇಲೆ ನಾವು ಆಗುತ್ತೇವೆ’ ಎಂದರು.

‘ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ ರಾಜಕೀಯ ಗಿಮಿಕ್ ಆಗಬಾರದು. ಆ ವಿಚಾರದಲ್ಲಿ ಸಮುದಾಯದ ಹಿತ ಗಮನದಲ್ಲಿಟ್ಟುಕೊಂಡು ಮುಂದುವರಿಯಬೇಕು’ ಎಂದು ಸಚಿವ ಶ್ರೀರಾಮುಲು ಅವರಿಗೆ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು