ಮಂಗಳವಾರ, ನವೆಂಬರ್ 29, 2022
28 °C

ಸಾವರ್ಕರ್‌ ಚಿತ್ರ: ಕಿಡಿಗೇಡಿಗಳ ಕೃತ್ಯ– ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಭಾರತ್‌ ಜೋಡೊ ಯಾತ್ರೆ ವೇಳೆ ಫ್ಲೆಕ್ಸ್‌ನಲ್ಲಿ ವಿ.ಡಿ.ಸಾವರ್ಕರ್‌ ಚಿತ್ರ ಕಂಡು ಬಂದಿದ್ದು ಇದು ಬಿಜೆಪಿಯ ಕಿಡಿಗೇಡಿಗಳ ಕೃತ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

‘ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಶಾಸಕ ಹ್ಯಾರಿಸ್‌ ಚಿತ್ರಗಳ ಜೊತೆ ಸಾವರ್ಕರ್‌ ಭಾವಚಿತ್ರವುಳ್ಳ ಫೆಕ್ಸ್‌ ಅಳವಡಿಸಲಾಗಿದೆ. ಇದು ಕಣ್ತಪ್ಪಿನಿಂದ ಆದ ತಪ್ಪಲ್ಲ, ಭಾರತ್‌ ಜೋಡೊ ಯಾತ್ರೆಗೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಸಾವರ್ಕರ್‌ ಭಾವಚಿತ್ರವುಳ್ಳ ಫ್ಲೆಕ್ಸ್‌ಗಳನ್ನು ಅಳವಡಿಸುತ್ತಿರುವ ವಿಷಯ ಗೊತ್ತಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ದೂರಿನ ಪ್ರತಿಯನ್ನು ಕೆಪಿಸಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು ‘ಬಿಜೆಪಿ ಡರ್ಟಿ ಪಾಲಿಟಿಕ್ಸ್‌ ಮಾಡುತ್ತಿದೆ’ ಎಂದು ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು